Featured

ಉಡುಪಿ: ಅರ್ಹ ಕುಟುಂಬಗಳಿಗೆ ಸೂರು ಕಲ್ಪಿಸುವ ಯಶ್ಪಾಲ್ ಸುವರ್ಣರ ಸೇವೆ ಕೂಡಾ ಶ್ರೀ ರಾಮ ದೇವರಿಗೆ ಸಂದ ಸೇವೆ : ಪೇಜಾವರ ಸ್ವಾಮೀಜಿ – vishwanews24

ಉಡುಪಿ: ಅರ್ಹ ಕುಟುಂಬಗಳಿಗೆ ಸೂರು ಕಲ್ಪಿಸುವ ಯಶ್ಪಾಲ್ ಸುವರ್ಣರ ಸೇವೆ ಕೂಡಾ ಶ್ರೀ ರಾಮ ದೇವರಿಗೆ ಸಂದ ಸೇವೆ : ಪೇಜಾವರ ಸ್ವಾಮೀಜಿ

ಶಾಸಕ ಯಶ್ ಪಾಲ್ ಸುವರ್ಣ ರ ಪುಷ್ಪಾನಂದ ಫೌಂಡೇಶನ್ ಮೂಲಕ ಮನೆ ಹಸ್ತಾಂತರ

ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮ ದೇವರಿಗೆ ಮಂದಿರ ನಿರ್ಮಾಣದ ಜೊತೆ ಜೊತೆಗೆ ರಾಮ ರಾಜ್ಯದ ನಿರ್ಮಾಣದ ಕನಸಿನಂತೆ ಅರ್ಹ ಕುಟುಂಬಗಳಿಗೆ ಸೂರು ಕಲ್ಪಿಸುವ ಆಶಯದಲ್ಲಿ ತಮ್ಮ ಪುಷ್ಪಾನಂದ ಫೌಂಡೇಶನ್ ಮೂಲಕ ಸುಮಾರು 12 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿದ ಸೇವೆ ಕೂಡಾ ಶ್ರೀರಾಮ ದೇವರಿಗೆ ಸಂದ ಸೇವೆ ಎಂದು ಪೇಜಾವರ ಮಠದ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.

ಮಲ್ಪೆ ವಡಭಾಂಡೇಶ್ವರ ವಾರ್ಡಿನ ಸುಶೀಲಾ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ರವರು ಪುಷ್ಪಾನಂದ ಫೌಂಡೇಶನ್ ಮೂಲಕ ತಮ್ಮ ಹೆತ್ತವರ ಸ್ಮರಣಾರ್ಥ ನಿರ್ಮಿಸಿದ ಮನೆಯ ಹಸ್ತಾಂತರ ನೆರವೇರಿಸಿ ಆಶೀರ್ವಚನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ ಪೇಜಾವರ ಶ್ರೀಗಳು ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಅರ್ಹರಿಗೆ ಸೂರು ಕಲ್ಪಿಸುವ ಸಂಕಲ್ಪಕ್ಕೆ ಪೂರಕವಾಗಿ ಕಳೆದ ರಾಮನವಮಿ ಶುಭದಿನದಂದು ಪೇಜಾವರ ಶ್ರೀಪಾದರು ಶಿಲಾನ್ಯಾಸ ನೆರವೇರಿಸಿದ ಮನೆ ಇಂದು ಸ್ವಾಮೀಜಿಯವರ ಅಮೃತ ಹಸ್ತದಿಂದ ಸುಸಜ್ಜಿತ ಮನೆಯನ್ನು ನಮ್ಮ ಫೌಂಡೇಶನ್ ಮೂಲಕ ನೀಡುತ್ತಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿಯೂ ಪುಷ್ಪಾನಂದ ಫೌಂಡೇಶನ್ ಮೂಲಕ ಸಮಾಜಮುಖಿ ಕಾರ್ಯಗಳು ನಿತ್ಯ ನಿರಂತರವಾಗಿ ನಡೆಸುವ ಆಶಯ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ನಗರಸಭಾ ಸದಸ್ಯರಾದ ಲಕ್ಷ್ಮೀ ಮಂಜುನಾಥ, ಸುಂದರ ಕಲ್ಮಾಡಿ, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಕಚ್ಚೂರು ಮಾಲ್ತಿದೇವಿ ದೇವಸ್ಥಾನದ ಗೋಕುಲ್ ದಾಸ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಮುಖಂಡರಾದ ಜಯನ್ ಮಲ್ಪೆ, ಶ್ರೀ ದಿನಕರ ಬಾಬು, ಅಜಿತ್ ಕಪ್ಪೆಟ್ಟು, ಮಂಜು ಕೊಳ, ಸನಿಲ್, ಜಗದೀಶ್ ಆಚಾರ್ಯ ಕಪ್ಪೆಟ್ಟು, ಸಂಧ್ಯಾ ರಮೇಶ್, ವಾಸುದೇವ ಸಾಲ್ಯಾನ್, ವನಜಾ ಪುತ್ರನ್, ಹಿಂದೂ ಯುವ ಸೇನೆಯ ಗೌರವಾಧ್ಯಕ್ಷ ಶೇಖರ ಶೆಟ್ಟಿ ಹಿರಿಯಡ್ಕ, ಜಿಲ್ಲಾಧ್ಯಕ್ಷ ಅಜಿತ್ ಕೊಡವೂರು, ನಗರ ಅಧ್ಯಕ್ಷ ಸುನೀಲ್ ನೇಜಾರು ಮೊದಲಾದವರು ಉಪಸ್ಥಿತರಿದ್ದರು.

ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಶಾಸಕರ ಆಪ್ತ ಕಾರ್ಯದರ್ಶಿ ಮಟ್ಟು ಯತೀಶ್ ಕೋಟ್ಯಾನ್ ವಂದಿಸಿದರು.

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

3 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

6 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

7 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

7 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

7 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

8 hours ago