Featured

ಉಡುಪಿ: ಅಲ್ಟ್ರಾ ಸ್ಕಾನಿಂಗ್ ಸೆಂಟರ್‌ಗಳನ್ನು ತೆರೆಯುವ ಮುನ್ನ ಸಕ್ಷಮ ಪ್ರಾಧಿಕಾರದಡಿ ನೋಂದಾವಣಿ ಕಡ್ಡಾಯ : ಡಾ. ಪ್ರತಾಪ್ ಕುಮಾರ್ -Vishwanews24

ಉಡುಪಿ: ಅಲ್ಟ್ರಾ ಸ್ಕಾನಿಂಗ್ ಸೆಂಟರ್‌ಗಳನ್ನು ತೆರೆಯುವ ಮುನ್ನ ಸಕ್ಷಮ ಪ್ರಾಧಿಕಾರದಡಿ ನೋಂದಾವಣಿ ಕಡ್ಡಾಯ : ಡಾ. ಪ್ರತಾಪ್ ಕುಮಾರ್ -Vishwanews24

ಉಡುಪಿ,: ಅಲ್ಟ್ರಾ ಸ್ಕಾನಿಂಗ್ ಸೆಂಟರ್‌ಗಳನ್ನು ತೆರೆಯುವ ಮುನ್ನ ಜಿಲ್ಲಾ ಸಕ್ಷಮ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳುವುದು ಕಾನೂನ್ವಯ ಕಡ್ಡಾಯವಾಗಿದೆ ಎಂದು ಪ್ರಸೂತಿ ತಜ್ಞ ಹಾಗೂ ಜಿಲ್ಲಾ ಪಿ.ಸಿ & ಪಿಎನ್‌ಡಿಟಿ ಸಲಹೆ ಸಮಿತಿಯ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ಹೇಳಿದರು.

ಅವರು ಇಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆ ಸಲಹ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಸರಕಾರ ಹೆರಿಗೆಗೂ ಮುನ್ನ ಭ್ರೂಣ ಲಿಂಗ ಪತ್ತೆ ಮಾಡುವ ತಂತ್ರದ ದುರ್ಬಳಕೆ ಮತ್ತು ತಡೆ ಕಾಯ್ಡೆಯನ್ನು ಜಾರಿಗೆ ತಂದಿದೆ ಇದರ ಸಮರ್ಪಕ ಅನುಷ್ಠಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡುವ ಬಗ್ಗೆ ದೂರುಗಳು ಬಂದಲ್ಲಿ ಅಂತಹವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಾನೂನುನಿನ ಕ್ರಮ ಕೈಗೊಳ್ಳಬೇಕು ಎಂದ ಅವರು ಸ್ಕಾನಿಂಗ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವವರು ಕಾಯ್ದೆಯ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ರಾಮರಾವ್ ಕೆ ಮಾತನಾಡಿ, ಕೆಲವು ಆಸ್ಪತ್ರೆಗಳಲ್ಲಿ ಉಪಯೋಗಿಸದೆ ಇರುವ ಸ್ಕಾನಿಂಗ್ ಯಂತ್ರಗಳನ್ನು ಈಗಾಗಲೇ ಜಪ್ತು ಮಾಡಲಾಗಿದೆ. ಅವುಗಳನ್ನು ಸರಕಾರದ ಮಾರ್ಗಸೂಚಿ ಅನ್ವಯ ವಿಲೇವಾರಿ ಮಾಡಬೇಕು ಎಂದರು.

18 ವರ್ಷ ಒಳಗಿನವರು ಸ್ಕಾನಿಂಗ್ ಮಾಡಲು ಬಂದoತಹ ಸಂದರ್ಭದಲ್ಲಿ ತೀರಸ್ಕರಿಸದೆ ಸ್ಕಾನಿಂಗ್ ಮಾಡಬೇಕು ಆ ಬಗ್ಗೆ ಸೂಕ್ತ ಪ್ರಾಧಿಕಾರಕ್ಕೆ ಮಾಹಿತಿಗಳನ್ನು ತಪ್ಪದೇ ನೀಡಬೇಕು ಎಂದ ಅವರು ಸ್ಕಾö್ಯಂನಿಗ್ ಸೆಂಟರ್‌ಗಳಿಗೆ ಬರುವ ಶೀತ, ಕೆಮ್ಮ, ಜ್ವರದಂತಹ ರೋಗಿಗಳ ಮಾಹಿತಿಗಳನ್ನು ಸಹ ನೀಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ ಮಾತನಾಡಿ, ನೋಂದಾಯಿತ ವೈದ್ಯರು ಭ್ರೂಣಲಿಂಗ ಪತ್ತೆ ಮಾಡಿ ಅಪರಾಧ ದೃಢಪಟ್ಟಲ್ಲಿ ಪ್ರಥಮ ಅಪರಾಧಕ್ಕೆ ರಾಜ್ಯ ವೈದ್ಯಕೀಯ ಮಂಡಳಿ ವತಿಯಿಂದ ವೈದ್ಯಕೀಯ ವೃತ್ತಿ ಮಾಡದಂತೆ ಅವರ ಹೆಸರನ್ನು 5 ವರ್ಷಗಳ ಕಾಲಕ್ಕೆ ತೆಗೆದು ಹಾಕಲಾಗುವುದು ಎಂದರು.

ಸಭೆಯಲ್ಲಿ ಮಕ್ಕಳ ತಜ್ಞ ಡಾ.ಕಿರಣ್ ಹೆಬ್ಬಾರ್, ಮೆಡಿಕಲ್ ಜೆನಿಕಿಕ್ಸ್ ಸದಸ್ಯ ಡಾ. ಗಿರೀಶ್ ಕೆ. ಎಮ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ನೌಕರರ ಸಂಘದ ಅಧ್ಯಕ್ಷ ಸುಬ್ರಮಣ್ಯ ಸೆರೆಗಾರ್, ಸಮಾಜ ಸೇವಕರುಗಳಾದ ಸರಿತಾ ಸಂತೋಷ್, ಗಣೇಶ್ ಪೈ, ಮತ್ತಿತರ ವೈಧ್ಯಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago