ಉಡುಪಿ : ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕರು ಹಾಗೂ ಭಕ್ತಾದಿಗಳು ಸಮೀಪದ ಪ್ರಸಿದ್ಧ ದೇವಾಲಯಗಳು ಮತ್ತು ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಮಂಗಳೂರು ವಿಭಾಗವು ಉಡುಪಿ ಬಸ್ ಘಟಕದಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸಗಳನ್ನು ಆಯೋಜಿಸಿದೆ. ಈ ಪ್ಯಾಕೇಜ್ ಪ್ರವಾಸಗಳು ಅಕ್ಟೋಬರ್ 11 ರಿಂದ 20 ರವರೆಗೆ ಕಾರ್ಯಾಚರಣೆ ನಡೆಸಲಿವೆ.
ಮೊದಲನೇ ಪ್ಯಾಕೇಜ್ ಪ್ರವಾಸ ಮಾರ್ಗ:
ಬಸ್ ಬೆಳಗ್ಗೆ 7:30ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದಿಂದ ಹೊರಟು, ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯ, ಎಸ್. ಕೆ. ಗಡಿ ಮಾರ್ಗವಾಗಿ ಶೃಂಗೇರಿ ಶ್ರೀ ಶಾರದಾಂಬ ದೇವಾಲಯ, ಕಿಗ್ಗಾದ ಋಷ್ಯಶೃಂಗೇಶ್ವರ ದೇವಾಲಯ, ಹರಿಹರಪುರ ಮಠ ಹಾಗೂ ಪೆರ್ಡೂರಿನ ಶ್ರೀ ಅನಂತ ಪದ್ಮನಾಭ ದೇವಾಲಯಕ್ಕೆ ಭೇಟಿ ನೀಡಿ, ರಾತ್ರಿ 8:00 ಗಂಟೆಗೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಹಿಂತಿರುಗಲಿದೆ.
ಎರಡನೇ ಪ್ಯಾಕೇಜ್ ಪ್ರವಾಸ ಮಾರ್ಗ:
ಬಸ್ ಬೆಳಗ್ಗೆ 7:30ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದಿಂದ ಹೊರಟು, ನೀಲಾವರ ಶ್ರೀ ಮಹಿಷಮರ್ದಿನಿ ದೇವಾಲಯ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಾಲಯ, ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಾಲಯ, ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಾಲಯ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ ಹಾಗೂ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ಸಂಜೆ 6:30ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಮರಳಲಿದೆ.
ಪ್ರಯಾಣ ದರ:
ಎರಡೂ ಪ್ಯಾಕೇಜ್ ಪ್ರವಾಸಗಳಿಗೆ ಹಿರಿಯರಿಗೆ/ವಯಸ್ಕರಿಗೆ ತಲಾ ರೂ. 500 ಹಾಗೂ 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ ರೂ. 400 ದರ ನಿಗದಿಪಡಿಸಲಾಗಿದೆ.
ಮುಂಗಡ ಕಾಯ್ದಿರಿಸುವಿಕೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ಘಟಕದ ವ್ಯವಸ್ಥಾಪಕರು- 7760995407, ಉಡುಪಿ ಘಟಕ- 7760994451, ಉಡುಪಿ ಮುಂಗಡ ಬುಕಿಂಗ್ ಕೌಂಟರ್- 9663266400 ಸಂಪರ್ಕಿಸಬಹುದಾಗಿದೆ.
ಪ್ರಯಾಣಿಕರಿಗೆ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಹಾಗೂ ಭಕ್ತಾದಿಗಳು ಈ ವಿಶೇಷ ಪ್ಯಾಕೇಜ್ ಪ್ರವಾಸ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳುವಂತೆ ಮಂಗಳೂರು ಕೆಎಸ್‌ಆರ್‌ಟಿಸಿ ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಚ್ಚಿಲ ದಸರಾ : ಅ.13ರಂದು ದೇವಸ್ಥಾನದ ಮುಂಭಾಗದಲ್ಲಿ ಕುಸ್ತಿ ಸ್ಪರ್ಧೆ ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ…
ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…
ಬೆಂಗಳೂರು: ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…