ಉಡುಪಿ : ಬಹ್ಮನ್ ಕನ್ನಡ ಸಂಘದ ವತಿಯಿಂದ ಯೋಗಪಟು ತನುಶ್ರೀ ಪಿತ್ರೋಡಿ ಅವರಿಂದ 10ನೇ ವಿಶ್ವದಾಖಲೆಗೆ ಪ್ರಯತ್ನ ಕಾರ್ಯಕ್ರಮ ಸೆ.24ರಂದು 10ಗಂಟೆಗೆ ಬಹ್ಮನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಬಂಗೇರ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನುಶ್ರೀ ಒಂದು ಗಂಟೆ ಅವಧಿಯಲ್ಲಿ 300 ಯೋಗಾಸಾನಗಳನ್ನು ಪ್ರದರ್ಶಿಸುವ ಮೂಲಕ ಹೊಸ ಗೋಲ್ಡನ್ ಬುಕ್ ಆಫ್ ವಲ್ಡ್ ರೆರ್ಕಾಡ್ ದಾಖಲೆ ಬರೆಯುವ ಪ್ರಯುತ್ನ ಮಾಡಲಿದ್ದಾರೆ. ಈ ಮೂಲಕ ಇವರು ಮೂರು ವರ್ಷಗಳ ಹಿಂದೆ ತಾನೇ ದಾಖಲಿಸಿದ 45 ನಿಮಿಷಗಳಲ್ಲಿ 245 ಆಸನಗಳ ಪ್ರದರ್ಶನವನ್ನು ಮುರಿಯಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಹ್ಮನ್‌ನ ಭಾರತೀಯ ರಾಯಭಾರಿ ಕಚೇರಿಯ ವಿನೋದ್ ಜಾಕೋಬ್ ಭಾಗವಹಿಸಲಿದ್ದಾರೆ. ಪ್ರಸ್ತುತ ಉಡುಪಿ ಸೈಂಟ್ ಸಿಸಿಲೀಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿರುವ 16ರ ಹರೆಯದ ತನುಶ್ರೀ ಈವರೆಗೆ ಯೋಗಾಸನದ ಮೂಲಕ ಎರಡು ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮತ್ತು ಆರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಹಾಗೂ ಭರತ ನಾಟ್ಯದಲ್ಲಿ ಒಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ತನುಶ್ರೀ ಅವರ ತಂದೆ ಉದಯ ಕುಮಾರ್, ಗ್ರಾಪಂ ಸದಸ್ಯ ಪ್ರವೀಣ್ ಕುರ್ಕಾಲು ಉಪಸ್ಥಿತರಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…