Featured

ಉಡುಪಿ:  ಅ.24 ರಂದು ಶ್ರೀಕೃಷ್ಣ ಮಠಕ್ಕೆ ಸುತ್ತೂರು  ಶ್ರೀ  – vishwanews24

ಉಡುಪಿ:  ಅ.24 ರಂದು ಶ್ರೀಕೃಷ್ಣ ಮಠಕ್ಕೆ ಸುತ್ತೂರು  ಶ್ರೀ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರ ಆಶಯದಂತೆ ಮೈಸೂರಿನ ಶ್ರೀ ಸುತ್ತೂರು ಮಠದ ಶ್ರೀ ಶಿವ ರಾತ್ರಿ ದೇಶಿಕೇಂದ್ರ ಸ್ವಾಮೀಜಿ ಯವರು ಅ.24 ರಂದು ಶ್ರೀಕೃಷ್ಣ ಮಠಕ್ಕೆ ಆಗಮಿಸಿ ಶ್ರೀಕಷ್ಣನ ದರ್ಶನ ಪಡೆಯುವರು. ಇದೇ ಸಂದರ್ಭ ಗೀತಾ ಮಂದಿರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಪುತ್ತಿಗೆ ನೃಸಿಂಹ ಸಭಾಭವನ’ವನ್ನು ಸಂಜೆ 4ಕ್ಕೆ ಸುತ್ತೂರು ಶ್ರೀಗಳು ಉದ್ಘಾಟಿಸಿ ಆಶೀರ್ವಚನ ನೀಡುವರು.

ಪರ್ಯಾಯ ಶ್ರೀ ಪುತ್ತಿಗೆ ಮಠಾ ಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿರುವರು. ಒಡಿಶಾ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಮೊದಲಾದವರು ಭಾಗವಹಿಸುವರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6ರಿಂದ 8ರ ತನಕ ಪ್ರಖ್ಯಾತ ಡ್ರಮ್ಸ್ ಕಲಾವಿದ ಶಿವಮಣಿ ಅವರಿಂದ “ನಾದ ವೈಭವಂ’ ನಡೆಯಲಿದೆ ಎಂದು ಶ್ರೀಮಠದ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

13 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

13 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

14 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

15 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

18 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

18 hours ago