Featured

ಉಡುಪಿ: ಅ.24-26 ಪ್ರಾಚ್ಯವಿದ್ಯಾ ಸಮ್ಮೇಳನ ; ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ – vishwanews24

ಉಡುಪಿಗೆ ಆಗಮಿಸಿ ಶ್ರೀಕೃಷ್ಣ ದೇವರ ದರ್ಶನ ಪಡೆದ ಬಾಬಾ ರಾಮ್‌ದೇವ್‌

ಉಡುಪಿ: ಶ್ರೀ ಕೃಷ್ಣಮಠ ಶ್ರೀ ಪರ್ಯಾಯ ಪುತ್ತಿಗೆ ಮಠದ ಸಹಯೋಗದಲ್ಲಿ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ಭಾರತೀಯ ವಿದ್ವತ್‌ ಪರಿಷತ್‌ ಆಶ್ರಯದಲ್ಲಿ ಅ.24ರಿಂದ 26ರ ವರೆಗೆ ನಡೆಯಲಿರುವ 51ನೇ ಅಖಿಲ ಭಾರತ ಪ್ರಾಚ್ಯ ವಿದ್ಯಾಸಮ್ಮೇಳನವನ್ನು ಉದ್ಘಾಟಿಸಲಿರುವ ಹರಿದ್ವಾರದ ಪತಂಜಲಿ ಯೋಗ ಪೀಠದ ಸಂಸ್ಥಾಪಕರಾದ ಬಾಬಾ ರಾಮ್‌ದೇವ್‌ ಅವರು ಬುಧವಾರ ರಾತ್ರಿ ಉಡುಪಿಗೆ ಆಗಮಿಸಿ, ಶ್ರೀಕೃಷ್ಣ ದೇವರ ದರ್ಶನ ಪಡೆದರು.

ಅ.24ರ ಬೆಳಗ್ಗೆ 5.30ರಿಂದ 7.30ರವರೆಗೆ ರಾಜಾಂಗಣದಲ್ಲಿ ನಡೆಯಲ್ಲಿ ಯೋಗ ಶಿಬಿರದಲ್ಲಿ ಪಾಲ್ಗೊಂಡು, ರಾಜಾಂಗಣದಲ್ಲಿಯೇ ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದಾರೆ.

ಅನಂತರ ಶ್ರೀ ಕೃಷ್ಣಮಠದಲ್ಲಿ ವೇದ ಘೋಷಗಳ ನಡುವೆ ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಬಾಬಾ ರಾಮ್‌ದೇವ್‌ ಅವರನ್ನು ಬರಮಾಡಿಕೊಂಡು, ಶ್ರೀ ಕೃಷ್ಣ ದೇವರ ದರ್ಶನ ಮಾಡಿಸಲಾಯಿತು. ಅನಂತರ ಪರ್ಯಾಯ ಶ್ರೀಪಾದರ ಅಪೇಕ್ಷೆಯಂತೆ ಗೀತಾಮಂದಿರಕ್ಕೆ ತೆರಳಿ ಪೊಡವಿಗೊಡೆಯ ಶ್ರೀಕೃಷ್ಣನ ಗೀತಾ ಸಂದೇಶವನ್ನು ಜಗದಗಲ ಸಾರುವ ಹಾಗೂ ಪ್ರಪಂಚದಾದ್ಯಂತ ಇರುವ ಶ್ರೀಕೃಷ್ಣ ಭಕ್ತರಲ್ಲಿ ಧಾರ್ಮಿಕ,ಸಾಂಸ್ಕೃತಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕೈಗೊಂಡ ವಿವಿಧ ಯೋಜನೆಗಳ ಬಗ್ಗೆ ತಿಳಿದುಕೊಂಡು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪತಂಜಲಿ ಯೋಗ ಪೀಠದ ಕುಲಪತಿ ಆಚಾರ್ಯ ಬಾಲಕೃಷ್ಣ, ಮಾತಾ ಸಾಧ್ವಿà ದೇವಪ್ರಿಯಾ ದೀದೀಜಿ, ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago