Featured

ಉಡುಪಿ: ಅ.27ರಂದು ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ, ಮಾರಾಟ – vishwanews24

ಉಡುಪಿ: ಅ.27ರಂದು ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ, ಮಾರಾಟ

ಉಡುಪಿ,: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬೃಹತ್ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಹಾಗೂ ಮಾರಾಟ ಮೇಳ ಅ.27ರಂದು ಕೊಡವೂರಿನ ಶಿರಡಿ ಸಾಯಿಬಾಬಾ ಮಂದಿರದಲ್ಲಿ ನಡೆಯಲಿದೆ.

ಸ್ಪರ್ಧೆಯ ಸಂಘಟಕರಾದ ಉಡುಪಿಯ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂನ ಉಪಾಧ್ಯಕ್ಷ ಹಾಗೂ ಸ್ಪರ್ಧೆಯ ಸಂಘಟಕ ವಿಜಯ ಕೊಡವೂರು ಅವರು ಇಂದು ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಅಯ್ಯಪ್ಪ ಸೇವಾ ಸಮಾಜಂನೊಂದಿಗೆ ಉಡುಪಿ ಜಿಲ್ಲಾ ಮಹಿಳಾ ಘಟಕ, ಎಪಿಎಂಸಿ ರಕ್ಷಣಾ ಸಮಿತಿ ಹಾಗೂ ಶಿರಡಿ ಸಾಯಿಬಾಬಾ ಮಂದಿರ ತೋಟದಮನೆ ಕೊಡವೂರು ಸಹ ಕೈಜೋಡಿಸಿದೆ ಎಂದವರು ಹೇಳಿದರು.

ಗೂಡುದೀಪ ಸ್ಪರ್ಧೆಯು ಅ.27ರಂದು ಬೆಳಗ್ಗೆ 8:30ರಿಂದ ಅಪರಾಹ್ನ 12:30ರವರೆಗೆ ನಡೆಯಲಿದೆ. ಸ್ಪರ್ಧೆಯನ್ನು ಉದ್ಯಮಿ ಡಾ.ಜಿ.ಶಂಕರ್ ಉದ್ಘಾಟಿಸಲಿದ್ದು, ಸಾಸ್‌ನ ಗೌರವಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ದಿವಾಕರ್ ಶೆಟ್ಟಿ, ಆನಂದ ಪಿ.ಸುವರ್ಣ, ಸಾಧು ಸಾಲಿಯಾನ್ ಮುಂತಾದವರು ಉಪಸ್ಥಿತರಿರುವರು ಎಂದರು.

ಗೂಡುದೀಪ ಸ್ಪರ್ಧೆಯಲ್ಲಿ ಭಾಗವಹಿಸುವವರು ಸ್ಥಳದಲ್ಲೇ ಹೆಸರು ನೊಂದಾಯಿಸಬಹುದು. ಒಂದು ತಂಡದಲ್ಲಿ ಇಬ್ಬರಿಗೆ ಅವಕಾಶವಿದ್ದು, ಸಾಂಪ್ರದಾಯಿಕ ಗೂಡುದೀಪಕ್ಕೆ ಬೇಕಾದ ತಯಾರಿ ಮಾಡಿಕೊಂಡು ಬರಬಹುದು. ಆದರೆ ಗೂಡುದೀಪ ವನ್ನು ಸ್ಥಳದಲ್ಲೇ ರಚಿಸಬೇಕು ಎಂದು ವಿಜಯ ಕೊಡವೂರು ತಿಳಿಸಿದರು.

ಸ್ಪರ್ಧೆಯು 16ವರ್ಷ ಮೇಲ್ಪಟ್ಟು ಹಾಗೂ 16 ವರ್ಷ ಕೆಳಗಿನವರು ವಿಭಾಗದಲ್ಲಿ ನಡೆಯಲಿದೆ. 16 ವರ್ಷ ಮೇಲಿನ ಸೀನಿಯರ್ ವಿಭಾಗದ ವಿಜೇತರಿಗೆ ಕ್ರಮವಾಗಿ 5,555, 4,444, 3,333 ಹಾಗೂ ಐದು ಮಂದಿಗೆ ತಲಾ 1000ರೂ. ಸಮಾಧಾನಕರ ಬಹುಮಾನವಿದೆ. 16 ವರ್ಷ ಕೆಳಗಿನ ವಿಭಾಗದ ವಿಜೇತರಿಗೆ 4,444, 3,333, 2,222 ಮತ್ತು 5 ಮಂದಿಗೆ ತಲಾ 1000ರೂ. ಸಮಾಧಾನಕರ ಬಹುಮಾನವಿದೆ.

ಈಗಾಗಲೇ 20ಕ್ಕೂ ಅಧಿಕ ಮಂದಿ ಸ್ಪರ್ಧೆಗೆ ಹೆಸರು ನೊಂದಾಯಿಸಿಕೊಂ ಡಿದ್ದಾರೆ. ಪ್ಲಾಸ್ಟಿಕ್ ಅಥವಾ ಥರ್ಮಾಕೋಲ್ ಬಳಕೆ ಮಾಡುವಂತಿಲ್ಲ ಎಂದ ಅವರು, ಸಾಂಪ್ರದಾಯಿಕ ಗೂಡುದೀಪ ತಯಾರಿಕೆಯನ್ನು ಮತ್ತೆ ಉತ್ತೇಜಿಸಲು ಇದನ್ನು ಆಯೋಜಿಸಲಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ರಾಧಾಕೃಷ್ಣ ಮೆಂಡನ್, ಜಿಲ್ಲಾ ಮಹಿಳಾ ಸಾಸ್‌ನ ಅಧ್ಯಕ್ಷೆ ತಾರಾ ಯು.ಆಚಾರ್ಯ, ಪ್ರದಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

1 hour ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

2 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

2 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

4 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

4 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

24 hours ago