Featured

ಉಡುಪಿ : ಅ.4ರಿಂದ  ಜಿಲ್ಲೆಯ ಯಾವುದೇ ಗ್ರಾ.ಪಂ.ಗಳಲ್ಲಿ ಯಾವುದೇ ಸೇವೆ ಲಭ್ಯವಿಲ್ಲ: ಮಂಜುನಾಥ ಶೆಟ್ಟಿ – vishwanews24

ಉಡುಪಿ :ಅ.4ರಿಂದ  ಜಿಲ್ಲೆಯ ಯಾವುದೇ ಗ್ರಾ.ಪಂ.ಗಳಲ್ಲಿ ಯಾವುದೇ ಸೇವೆ ಲಭ್ಯವಿಲ್ಲ: ಮಂಜುನಾಥ ಶೆಟ್ಟಿ

ಉಡುಪಿ: ಜಿಲ್ಲೆಯ 155 ಗ್ರಾಮ ಪಂಚಾಯತ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪಿಡಿಓ ಸೇರಿದಂತೆ ಸಮಸ್ತ ನೌಕರರು ರಾಜ್ಯ ಮಟ್ಟದ ಮುಷ್ಕರದಲ್ಲಿ ಪಾಲ್ಗೊಳ್ಳಲಿರುವುದರಿಂದ ಅ.4ರಿಂದ ಜಿಲ್ಲೆಯ ಯಾವುದೇ ಗ್ರಾಪಂನಲ್ಲಿ ಅನಿರ್ಧಿಷ್ಟಾವಧಿ ಯವರಿಗೆ ಯಾವುದೇ ಸೇವೆ ಲಭ್ಯವಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷ ಹಾಗೂ ರಾಜ್ಯ ವಿಭಾಗೀಯ ಅಧ್ಯಕ್ಷ ಮಂಜುನಾಥ ಪಿ.ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಥಳೀಯ ಸಂಸ್ಥೆಯಾದ ಗ್ರಾಪಂಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಸ್ತ ನೌಕರರು ಅ.4ರಿಂದ ಸರಕಾರ ಹಾಗೂ ಇಲಾಖೆಯ ಧೋರಣೆಯನ್ನು ಖಂಡಿಸಿ ಮತ್ತು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಧರಣಿ ಮುಷ್ಕರದಲ್ಲಿ ಪಾಲ್ಗೊಳ್ಳಲಿರುವುದರಿಂದ ಗ್ರಾಪಂಗಳಲ್ಲಿ ಯಾವುದೇ ಕೆಲಸ ನಡೆಯುವುದಿಲ್ಲ ಎಂದರು.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ನೇತೃತ್ವದಲ್ಲಿ 11 ವೃಂದ ಸಂಘಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಮುಷ್ಕರವನ್ನು ಆಯೋಜಿಸಲಿದ್ದು, ಇಡೀ ರಾಜ್ಯದ ಎಲ್ಲಾ ಗ್ರಾಪಂ ಸೇವೆಗಳನ್ನು ನಿಲ್ಲಿಸಿ ಅನಿರ್ಧಿಷ್ಟಾವಧಿ ಹೋರಾಟವನ್ನು ನಡೆಸಲಿವೆ ಎಂದರು.

ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಸಿದ್ಧೇಶ್, ಶಿವರಾಜ್ ಎಂ, ಪ್ರಶಾಂತ್ ಕೆ., ರಮೇಶ್ ಕೆ.ನಾಯಕ್, ಸಂತೋಷ ಜೋಗಿ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 hour ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 hour ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

5 hours ago