Featured

ಉಡುಪಿ: ಅ 6. ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅ. 6ರಂದು ‘ಭಾರತಕ್ಕಾಗಿ ನಡಿಗೆ’ ಜಾಥಾ – Vishwanews24

ಉಡುಪಿ: ಅ 6. ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅ. 6ರಂದು ‘ಭಾರತಕ್ಕಾಗಿ ನಡಿಗೆ’ ಜಾಥಾ

ಉಡುಪಿ: ಸ್ವಾತಂತ್ರ್ಯ 75ನೇ ವರ್ಷದ “ಅಮೃತ ಮಹೋತ್ಸವ” ಸಂಭ್ರಮಾಚಾರಣೆನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸ್ವಾತಂತ್ರ್ಯ ಸಂಗ್ರಾಮದ ವೀರ-ಯೋಧರ ತ್ಯಾಗ, ಬಲಿದಾನ ಮತ್ತು ಶಾಂತಿ, ಸಾಮರಸ್ಯ ಹಾಗೂ ದೇಶಪ್ರೇಮದ ಸಂದೇಶವನ್ನು ಸಾರುವ ಸಲುವಾಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ದೇಶದಾದ್ಯಂತ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಂಡಿದೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾವು, ಅಗಸ್ಟ್ 6ರಂದು ಶನಿವಾರ ಬೆಳಿಗ್ಗೆ 9.00 ಘಂಟೆಗೆ ಕಾಲ್ನಡಿಗಯು ಕನ್ನಾರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಿಂದ ಪ್ರಾರಂಭವಾಗಿ ಕಿನಿಮುಲ್ಕಿ ಮುಖ್ಯದ್ವಾರದ ಮೂಲಕ ಸಾಗಿ ಉಡುಪಿ ಜೋಡುರಸ್ತೆಯ ಮುಖಾಂತರ ಕೋರ್ಟ್ ರೋಡ್ ಮೂಲಕ ಸರ್ವಿಸ್ ಬಸ್ ನಿಲ್ದಾಣದ ಮೂಲಕ ಸಾಗಿ ಕಿದಿಯೂರು ಹೋಟೆಲ್‌ನ ಮೂಲಕ ಸಾಗಿ ಸಿಟಿ ಬಸ್ಸು ನಿಲ್ದಾಣದಿಂದ ಕಲ್ಸಂಕದ ಮೂಲಕ ಕಡಿಯಾಳಿಯಾಗಿ ಎಂ ಜಿ ಎಂ ಕಾಲೇಜಿನ ಮುಂಭಾಗದಿಂದ ಸಾಗಿ ಕೊನೆಗೆ ಇಂದ್ರಾಳಿ ಬಸ್ಸು ನಿಲ್ದಾಣ ಬಳಿ ಸಮಾರೋಪ ಸಭೆಯು ನಡೆಯಲಿದೆ.

ದೇಶಪ್ರೇಮ ಮತ್ತು ಸಾಮರಸ್ಯದ ಸಂದೇಶವನ್ನು ಸಾರುವ ಈ ಒಂದು ಐತಿಹಾಸಿಕ ಕಾಲ್ನಡಿಗೆ ಜಾಥಾದಲ್ಲಿ ನಾವೆಲ್ಲರೂ ಭಾಗವಹಿಸುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ಸ್ಮರಿಸುವುದರೊಂದಿಗೆ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಅನೇಕ ಹಿರಿಯ ನಾಯಕರು ಈ ಸಭೆಯಲ್ಲಿ ಭಾಗವಹಿಸುತ್ತಿದ್ದು ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ ಮುಖಂಡರು, ಪಕ್ಷದ ವಿವಿಧ ಘಟಕ, ಸಮಿತಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಸ್ಥಳೀಯಾಡಳಿತ ಸಂಸ್ಥೆಗಳ ಹಾಲಿ ಹಾಗೂ ಮಾಜಿ ಸದಸ್ಯರು, ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕ ಬಂಧು ಮಿತ್ರರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮನವಿ ಮಾಡಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago