ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24
ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ
ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ವತಿಯಿಂದ ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಯೋಗ ಹಾಗೂ ಎಂ.ಆರ್.ಜಿ. ಗ್ರೂಪ್ನ ಪ್ರಾಯೋಜಕತ್ವದಲ್ಲಿ ಐದನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್ಪೋ–2026 ಅಕ್ಟೋಬರ್ 9ರಂದು ಶುಕ್ರವಾರ ನಡೆಯಲಿದೆ.
ಕುಂತಳನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್ ಹಾಗೂ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಆವರಣದಲ್ಲಿ ಮೇಳ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ತಿಳಿಸಿದರು.
ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24
ಉಡುಪಿ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಯುವಜನರಿಗೆ ಅವರ ವಿದ್ಯಾರ್ಹತೆ ಮತ್ತು ಕೌಶಲ್ಯಗಳಿಗೆ ತಕ್ಕ ಉದ್ಯೋಗಾವಕಾಶಗಳನ್ನು ಪರಿಚಯಿಸುವುದು ಮೇಳದ ಉದ್ದೇಶವಾಗಿದೆ. ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ, ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೂ ಪ್ರಮುಖ ಕಂಪನಿಗಳ ಪ್ರತಿನಿಧಿಗಳನ್ನು ನೇರವಾಗಿ ಭೇಟಿಯಾಗಿ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.
ಬೆಳಿಗ್ಗೆ 9 ಗಂಟೆಗೆ ಅಭ್ಯರ್ಥಿಗಳ ನೋಂದಣಿ ಹಾಗೂ ಸಂದರ್ಶನ ಪ್ರಕ್ರಿಯೆ ಆರಂಭವಾಗಲಿದ್ದು, ಸಂಜೆ 5 ಗಂಟೆಯವರೆಗೆ ಮೇಳ ನಡೆಯಲಿದೆ. ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಆಗಮಿಸಿ, ತಮ್ಮ ವಿದ್ಯಾರ್ಹತೆ ಮತ್ತು ಆಸಕ್ತಿಗೆ ಹೊಂದುವ ಕಂಪನಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24
ಬೃಹತ್ ಉದ್ಯೋಗ ಮೇಳವನ್ನು ಎಂ.ಆರ್.ಜಿ. ಗ್ರೂಪ್ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಹಾಗೂ ಸ್ಟಡಿ ಅಬ್ರಾಡ್ ಎಕ್ಸ್ಪೋವನ್ನು ನಿಟ್ಟೆ ವಿಶ್ವವಿದ್ಯಾಲಯದ ಚಾನ್ಸೆಲರ್ ಎನ್. ವಿಶಾಲ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ‘ಕೌಶಲ್ಯ ಸ್ಕಿಲ್ಸ್–2026’ ಬುಲೆಟಿನ್ನ್ನು ಮಾಹೆಯ ಪ್ರೊ ಚಾನ್ಸೆಲರ್ ಡಾ. ಎಚ್.ಎಸ್. ಬಲ್ಲಾಳ್ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ರಾಜಕೀಯ ಹಾಗೂ ಸಾಮಾಜಿಕ ಮುಖಂಡರು, ಉದ್ಯಮಿಗಳು ಮತ್ತು ವಿವಿಧ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದರು.
ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿ ಕಲ್ಯಾಣ, ತರಬೇತಿ ಮತ್ತು ಉದ್ಯೋಗ ನಿಯೋಜನೆ ವಿಭಾಗದ ಮುಖ್ಯಸ್ಥ ಭರತ್ ಕುಮಾರ್ ಜಿ. ಮಾತನಾಡಿ, ಮೇಳದಲ್ಲಿ ಭಾಗವಹಿಸಲು ಸುಮಾರು 50 ಕಂಪನಿಗಳು ಈಗಾಗಲೇ ನೋಂದಣಿ ಮಾಡಿಕೊಂಡಿದ್ದು, ಅವುಗಳಲ್ಲಿ 10ಕ್ಕೂ ಹೆಚ್ಚು ಕಾರ್ಪೊರೇಟ್ ಕಂಪನಿಗಳು ಸೇರಿವೆ. ಸುಮಾರು 2,500 ಉದ್ಯೋಗಾವಕಾಶಗಳು ಲಭ್ಯವಾಗುವ ನಿರೀಕ್ಷೆಯಿದ್ದು, 3,000ಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24
ಉತ್ಪಾದನೆ, ಮಾಹಿತಿ ತಂತ್ರಜ್ಞಾನ, ಸೇವಾ ವಲಯ, ಆಡಳಿತ ಮತ್ತು ನಿರ್ವಹಣೆ, ಸೌಲಭ್ಯ ನಿರ್ವಹಣೆ, ಮಾರಾಟ ಮತ್ತು ಮಾರುಕಟ್ಟೆ, ಲೆಕ್ಕಪತ್ರ ಮತ್ತು ಹಣಕಾಸು, ನವೀಕರಿಸಬಹುದಾದ ಇಂಧನ, ವಾಹನೋದ್ಯಮ ಹಾಗೂ ಚಿಲ್ಲರೆ ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವಕಾಶಗಳು ಇರಲಿವೆ. ಎಂಜಿನಿಯರಿಂಗ್ ಮತ್ತು ತಾಂತ್ರಿಕ ಹುದ್ದೆಗಳ ಜೊತೆಗೆ ಫಿಟ್ಟರ್, ತಂತ್ರಜ್ಞ ಹಾಗೂ ವಿವಿಧ ಕೌಶಲ್ಯಾಧಾರಿತ ಹುದ್ದೆಗಳಿಗೂ ನೇಮಕಾತಿ ನಡೆಯಲಿದೆ ಎಂದರು.
ಎಂಜಿನಿಯರಿಂಗ್ನ ಎಲ್ಲ ವಿಭಾಗಗಳ ಪದವೀಧರರು, ಡಿಪ್ಲೊಮಾ, ಐಟಿಐ, ಯಾವುದೇ ವಿಷಯದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರು, ಎಂಬಿಎ, ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಬಹುದು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಉದ್ಯೋಗಾವಕಾಶಗಳು ಮತ್ತು ಕಂಪನಿಗಳ ನೇಮಕಾತಿ ಅಗತ್ಯಗಳ ಕುರಿತು ತಿಳಿದುಕೊಳ್ಳಲು ಅವಕಾಶವಿದೆ ಎಂದು ಹೇಳಿದರು.
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24
