ಉಡುಪಿ : ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12 ರಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದು , ಈ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಯು ಇಂದು ಜಿಲ್ಲಾದಿಕಾರಿ ಕಚೇರಿಯಲ್ಲಿ ನಡೆಯಿತು.
ಮಾನ್ಯ ಮುಖ್ಯಮಂತ್ರಿಗಳ ಸಭೆಗೆ ಜಿಲ್ಲೆಯ ಪ್ರಸಕ್ತ ಕೋವಿಡ್ ಪರಿಸ್ಥಿತಿಯ ಕುರಿತು ಸಮಗ್ರ ವರದಿಯನ್ನು ಸಿದ್ದಪಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಪ್ರಾಕೃತಿಕ ವಿಕೋಪ ಪರಿಸ್ಥಿತಿಯ ಕುರಿತಂತೆ ವರದಿಯನ್ನು ಸಿದ್ದಪಡಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬAದಿಸಿದ ಎಲ್ಲಾ ಮಾಹಿತಿಯನ್ನು ಸಿದ್ದಪಡಿಸಿಟ್ಟುಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗಧೀಶ್, ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ಪ್ರಮುಖ ಸಮಸ್ಯೆಗಳ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು,ಕುಂದಾಪುರ ಉಪ ವಿಬಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…