ಉಡುಪಿ

ಉಡುಪಿ : ಆಗಸ್ಟ್ 14 ರಂದು ಮೇಘಾ ಲೋಕ್ ಅದಾಲತ್ – Vishwanews24

ಉಡುಪಿ : ಆಗಸ್ಟ್ 14 ರಂದು ಮೇಘಾ ಲೋಕ್ ಅದಾಲತ್ – Vishwanews24

ಉಡುಪಿ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಆಗಸ್ಟ್ 14 ರಂದು ಮೇಘಾ ಲೋಕ್ ಅದಾಲತ್‌ನ್ನು ಅಯೋಜಿಸಲಾಗುವುದು.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎA.ಡಿ.ಆರ್. ಪ್ರಕರಣ, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್/ಸಾಲದ ವಸೂಲಾತಿ ಪ್ರಕರಣಗಳು, ಮೋಟಾರು/ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬAಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಛೇದನೆಯನ್ನು ಹೊರತುಪಡಿಸಿ), ಭೂ-ಸ್ವಾಧೀನ ಪರಿಹಾರ ಪ್ರಕರಣಗಳು, ಭೂ-ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬAಧಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯಗಳಲ್ಲಿ ಉಭಯಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೊ.ನಂ: 9480898702 ಅನ್ನು ಸಂಪರ್ಕಿಸುವoತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜೆ.ಎನ್. ಸುಬ್ರಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago