ಉಡುಪಿ : ಆಗಸ್ಟ್ 30 ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಕಳೆ ತೆಗೆಯುವ ಅಭಿಯಾನ -Vishwanews24
ಉಡುಪಿ : ಆಗಸ್ಟ್ 30 ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಕಳೆ ತೆಗೆಯುವ ಅಭಿಯಾನ -Vishwanews24
ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕರಾದ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಹಡಿಲು ಭೂಮಿ ಕೃಷಿಯ ಭತ್ತದ ಗದ್ದೆಯಲ್ಲಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಳೆ ತೆಗೆಯುವ ಅಭಿಯಾನ ಕಾರ್ಯಕ್ರಮಕ್ಕೆ ಆಗಸ್ಟ್ 30 ರಂದು ಬೆಳಿಗ್ಗೆ 9 ಗಂಟೆಗೆ ಕೆಳ ನೇಜಾರು ಮೂಡುತೋನ್ಸೆಯಲ್ಲಿ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷರಾದ ಡಾ ಸಂದೀಪ್ ಕುಮಾರ್ ಹಾಗೂ ಖ್ಯಾತ ನಟ ನಿರ್ದೇಶಕರಾದ ರಿಷಭ್ ಶೆಟ್ಟಿ ಚಾಲನೆ ನೀಡಲಿದ್ದಾರೆ ಎಂದು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಬಿಜೆಪಿ ನಗರ ಯುವಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾರಂಭದಲ್ಲಿ ಶಾಸಕರಾದ ಶ್ರೀ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ವಿಖ್ಯಾತ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ರಾಘವೇಂದ್ರ ಕಿಣಿ ಹಾಗೂ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
