ಉಡುಪಿ : ಆಟೋ ಪಲ್ಟಿಯಾಗಿ ಗಾಯಗೊಂಡ ಮಹಿಳೆ ,ಮಾನವೀಯತೆ ಮೆರೆದ ಸಚಿವ ರಾಮುಲು -Vishwanews24
ಉಡುಪಿ : ಇಂದು ಉಡುಪಿ ಬಳಿ ಉಡುಪಿ-ಕುಂದಾಪುರ ರಸ್ತೆಯಲ್ಲಿ ಆಟೋ ಪಲ್ಟಿಯಾಗಿ ಗಾಯಗೊಂಡ ಮಹಿಳೆಯನ್ನು ಆರೋಗ್ಯ ಸಚಿವ ಬಿ.ಶ್ರೀರಾಮಲು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಉಡುಪಿ ಕುಂದಾಪುರ ರಸ್ತೆಯಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೋಗುತ್ತಿದ್ದಾಗ ಆಟೋ ಪಲ್ಟಿಯಾಗಿ ಮಹಿಳೆಯೊಬ್ಬರು ಗಾಯಗೊಂಡು ಬಿದ್ದಿದ್ದರು. ಕೂಡಲೇ ಅವರಿಗೆ ಸ್ಥಳದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಇನ್ನು ಘಟನೆ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಶ್ರೀರಾಮುಲು, ಅಪಘಾತ ಸಂಭವಿಸಿದಾಗ ನೂರಾರು ಮಂದಿ ಸೇರುತ್ತಾರೆ. ನೂರಾರು ಮಂದಿ ಸೇರಿದ್ದರೂ ಆಂಬುಲೆನ್ಸ್ ಗೆ ಕರೆ ಮಾಡಿ ಅದು ಬರುವವರೆಗೆ ಕಾಯುತ್ತಾರೆ. ಆದರೆ, ಮಾನವನ ಜೀವ ಅಮೂಲ್ಯ. ಸಮೀಪದಲ್ಲೇ ಆಸ್ಪತ್ರೆ ಇದ್ದರೆ ಆಂಬುಲೆನ್ಸ್ ಬರುವವರೆಗೆ ಕಾಯದೆ ಅಲ್ಲಿದ್ದ ವಾಹದಲ್ಲಿ ಗಾಯಾಳುಗಳನ್ನು ಸಾಗಿಸುವುದು ಮಾನವೀಯತೆ. ಇದನ್ನು ಎಲ್ಲರೂ ರೂಢಿಸಿಕೊಂಡರೆ ಸಾವಿರಾರು ಪ್ರಾಣಗಳನ್ನು ಕಾಪಾಡಬಹುದು ಎಂದು ಬರೆದುಕೊಂಡಿದ್ದಾರೆ.
ಈ ಸಂದರ್ಭ ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಯಿತು. ಇದೇ ವೇಳೆ ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಶಾಸಕ ರಘುಪತಿ ಭಟ್ ಸಚಿವ ಶ್ರೀರಾಮುಲು ಅಪಘಾತ ಗಮನಿಸಿ ಸ್ಥಳಕ್ಕೆ ಧಾವಿಸಿ ಬಂದರು. ಮಾತ್ರವಲ್ಲದೆ ಗಾಯಾಳುಗಳಿಗೆ ನೀರು ಕುಡಿಸಿ ಸಮಾಧಾನಿಸಿ ಗಾಯಾಳುಗಳನ್ನು ತಾನೇ ಎತ್ತಿ ಕಾರಿನಲ್ಲಿ ಕೂರಿಸಿದ ಆರೋಗ್ಯ ಸಚಿವರು ಬಳಿಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.
