Featured

ಉಡುಪಿ : ಆಟೋ ಪಲ್ಟಿಯಾಗಿ ಗಾಯಗೊಂಡ ಮಹಿಳೆ ,ಮಾನವೀಯತೆ ಮೆರೆದ ಸಚಿವ ರಾಮುಲು -Vishwanews24

ಉಡುಪಿ : ಇಂದು ಉಡುಪಿ ಬಳಿ ಉಡುಪಿ-ಕುಂದಾಪುರ ರಸ್ತೆಯಲ್ಲಿ ಆಟೋ ಪಲ್ಟಿಯಾಗಿ ಗಾಯಗೊಂಡ ಮಹಿಳೆಯನ್ನು ಆರೋಗ್ಯ ಸಚಿವ ಬಿ.ಶ್ರೀರಾಮಲು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಉಡುಪಿ ಕುಂದಾಪುರ ರಸ್ತೆಯಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೋಗುತ್ತಿದ್ದಾಗ ಆಟೋ ಪಲ್ಟಿಯಾಗಿ ಮಹಿಳೆಯೊಬ್ಬರು ಗಾಯಗೊಂಡು ಬಿದ್ದಿದ್ದರು. ಕೂಡಲೇ ಅವರಿಗೆ ಸ್ಥಳದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಇನ್ನು ಘಟನೆ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಶ್ರೀರಾಮುಲು, ಅಪಘಾತ ಸಂಭವಿಸಿದಾಗ ನೂರಾರು ಮಂದಿ ಸೇರುತ್ತಾರೆ. ನೂರಾರು ಮಂದಿ ಸೇರಿದ್ದರೂ ಆಂಬುಲೆನ್ಸ್ ಗೆ ಕರೆ ಮಾಡಿ ಅದು ಬರುವವರೆಗೆ ಕಾಯುತ್ತಾರೆ. ಆದರೆ, ಮಾನವನ ಜೀವ ಅಮೂಲ್ಯ. ಸಮೀಪದಲ್ಲೇ ಆಸ್ಪತ್ರೆ ಇದ್ದರೆ ಆಂಬುಲೆನ್ಸ್ ಬರುವವರೆಗೆ ಕಾಯದೆ ಅಲ್ಲಿದ್ದ ವಾಹದಲ್ಲಿ ಗಾಯಾಳುಗಳನ್ನು ಸಾಗಿಸುವುದು ಮಾನವೀಯತೆ. ಇದನ್ನು ಎಲ್ಲರೂ ರೂಢಿಸಿಕೊಂಡರೆ ಸಾವಿರಾರು ಪ್ರಾಣಗಳನ್ನು ಕಾಪಾಡಬಹುದು ಎಂದು ಬರೆದುಕೊಂಡಿದ್ದಾರೆ.

ಈ ಸಂದರ್ಭ ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಯಿತು. ಇದೇ ವೇಳೆ ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಶಾಸಕ ರಘುಪತಿ ಭಟ್ ಸಚಿವ ಶ್ರೀರಾಮುಲು ಅಪಘಾತ ಗಮನಿಸಿ ಸ್ಥಳಕ್ಕೆ ಧಾವಿಸಿ ಬಂದರು. ಮಾತ್ರವಲ್ಲದೆ ಗಾಯಾಳುಗಳಿಗೆ ನೀರು ಕುಡಿಸಿ ಸಮಾಧಾನಿಸಿ ಗಾಯಾಳುಗಳನ್ನು ತಾನೇ ಎತ್ತಿ ಕಾರಿನಲ್ಲಿ ಕೂರಿಸಿದ ಆರೋಗ್ಯ ಸಚಿವರು ಬಳಿಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

12 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

17 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

17 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

17 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago