Featured

ಉಡುಪಿ : ಆಧಾರ್ ಕಾರ್ಡ್ ನವೀಕರಣಗೊಳಿಸಲು ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ – Vishwanews24

ಉಡುಪಿ : ಆಧಾರ್ ಕಾರ್ಡ್ ನವೀಕರಣಗೊಳಿಸಲು ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ

ಉಡುಪಿ : ಜಿಲ್ಲೆಯಲ್ಲಿ ಕಳೆದ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೊಂದಣಿ ಮಾಡಿಸಿಕೊಂಡ ಪ್ರತಿಯೊಬ್ಬ ಸಾರ್ವಜನಿಕರೂ ತಮ್ಮ ವಿಳಾಸ ದೃಢೀಕರಣ ದಾಖಲೆಯೊಂದಿಗೆ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಣ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಧಾರ್ ನವೀಕರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರ ನೀಡಿರುವ ಆಧಾರ್ ವಿಶಿಷ್ಠ ಗುರುತಿನ ಚೀಟಿಯನ್ನು ಪ್ರತಿಯೊಬ್ಬ ಭಾರತೀಯ ಪ್ರಜೆಗಳೂ ಮಾಡಿಸಿಕೊಳ್ಳಬೇಕು,ಈಗಾಗಲೇ ಆಧಾರ್ ಕಾರ್ಡ್ ನೊಂದಣಿಯನ್ನು 10 ವರ್ಷಗಳ ಹಿಂದೆ ಮಾಡಿಸಿದ್ದÀವರು ತಮ್ಮ ವಿಳಾಸ ಗುರುತಿನ ದಾಖಲೆಗಳನ್ನು ನೀಡುವುದರೊಂದಿಗೆ ಕಡ್ಡಾಯವಾಗಿ ನವೀಕರಣಗೊಳಿಸಿಕೊಳ್ಳಬೇಕು ಎಂದರು. ಈಗಾಗಲೇ ಜಿಲ್ಲೆಯಲ್ಲಿ 5 ವರ್ಷದೊಳಗಿನ 42312 ಮಕ್ಕಳು ಆಧಾರ್ ನೊಂದಣಿ ಮಾಡಿಸಿಕೊಂಡಿದ್ದು, ಕೈ ಬೆರಳಚ್ಚು ಮತ್ತು ಕಣ್ಣಿನ ಸ್ಕಾö್ಯನ್ ಸೇರಿದಂತೆ ಮತ್ತಿತರ ಬಯೋಮೆಟ್ರಿಕ್ ನೀಡದೇ ಇರುವ , ಪ್ರತಿಯೊಬ್ಬ ಆಧಾರ್ ನೊಂದಣಿ ಮಾಡಿಸಿಕೊಂಡಿರುವ ಮಕ್ಕಳು ಬಯೋಮೆಟ್ರಿಕ್ ನೀಡಬೇಕು ಎಂದರು.

ಜಿಲ್ಲೆಯಲ್ಲಿ 13 ಲಕ್ಷಕ್ಕೂ ಅಧಿಕ ಜನರು ಆಧಾರ್ ನೊಂದಣಿಯನ್ನು ಮಾಡಿಸಿಕೊಂಡಿದ್ದು , ಅದರಲ್ಲಿ 15 ವರ್ಷ ಮೇಲ್ಪಟ್ಟ 2 ಲಕ್ಷ ಜನರು ತಮ್ಮ ಮೊಬೈಲ್ ಸಂಖ್ಯೆ ಜೋಡಣೆಯನ್ನು ಮಾಡಿಸದೇ ಇದ್ದು ಅಂತಹವರು ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿಕೊಳ್ಳಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರದ ಸೌಲಭ್ಯ ಪಡೆಯಲು ಆಧಾರ್ ಸಂಖ್ಯೆ ಪ್ರಮುಖ ಪಾತ್ರ ವಹಿಸುತ್ತಿದೆ. ಆಧಾರ್  ಸಂಖ್ಯೆಯು ಬ್ಯಾಂಕ್ ಖಾತೆ ಜೋಡಣೆ ಹೊಂದಿ, ಸರ್ಕಾರದ ವಿವಿಧ ಯೋಜನೆಗಳ ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ಗಳ ಖಾತೆಗೆ ವರ್ಗಾಯಿಸಲು ಸಹ ಸುಲಭವಾಗಲಿದೆ ಎಂದರು.

ಸಭೆಯಲ್ಲಿ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್ , ಆಧಾರ್ ಪ್ರಾಧಿಕಾರದ ಉಪ ನಿರ್ದೇಶಕ ರಾಘವೇಂದ್ರ ಎಸ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

16 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

17 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

18 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

18 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

18 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

18 hours ago