Featured

ಉಡುಪಿ:  ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ – vishwanews24

ಉಡುಪಿ:  ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಉಡುಪಿ: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29ರಂದು ಫೇಸ್‌ಬುಕ್ ನಲ್ಲಿ ವರ್ಕ್‌ಫ್ರಮ್ ಹೋಮ್ ಕುರಿತ ಜಾಹೀರಾತಿಗೆ ಕ್ಲಿಕ್ ಮಾಡಿದ್ದು, ಆಗ ವಿಜಯಲಕ್ಷ್ಮೀ ಅವರ ವಾಟ್ಸಾಪ್‌ಗೆ ಸಂದೇಶ ಬಂದಿತ್ತು. ತಾನು ಕಂಪೆನಿಯೊಂದರ ಎಚ್‌ಆರ್ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿ, ಪಾರ್ಟ್ ಟೈಮ್ ಕೆಲಸ ಮಾಡಲು ಆಸಕ್ತಿ ಇದ್ದರೆ ಫಾರ್ಮ್ ಪಿಲ್ ಮಾಡಿ ಕಳುಹಿಸಿ ಎಂಬುದಾಗಿ ಸಂದೇಶ ಕಳುಹಿಸಿದ್ದನು.

ಅದರ ನಂತರ ವಿವಿಧ ಲಿಂಕ್‌ಗಳನ್ನು ಕಳುಹಿಸಿದ್ದು, ಅದರಲ್ಲಿ ವಿವಿಧ ಟಾಸ್ಕ್‌ಗಳನ್ನು ನೀಡಲಾಗಿತ್ತು. ಟಾಸ್ಕ್ ಮಾಡಿರುವುದಕ್ಕೆ ಹಣವನ್ನು ಕೂಡ ಹಾಕಲಾಗಿತ್ತು. ಡಿ.1ರಂದು ಇನ್ನೊಂದು ಲಿಂಕ್ ಕಳುಹಿಸಿದ್ದು, ಅದನ್ನು ಒತ್ತಿದಾಗ ಟೆಲಿಗಾಮ್ ಖಾತೆ ಓಪನ್ ಆಗಿತ್ತು. ಅದರಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ತಿಳಿಸಲಾಗಿತ್ತು. ಅದನ್ನು ನಂಬಿದ ವಿಜಯಲಕ್ಷ್ಮೀ, ಆರೋಪಿತರು ತಿಳಿಸಿದಂತೆ ಡಿ.1ರಿಂದ ಡಿ.4ರವರೆಗೆ ಒಟ್ಟು 31,00,067ರೂ. ಹಣವನ್ನು ಪಾವತಿ ಮಾಡಿದ್ದರು. ಆದರೆ ಈವರೆಗೆ ಹೂಡಿಕೆ ಮಾಡಿದ ಹಣವನ್ನಾಗಲೀ ಅಥವಾ ಅದರ ಲಾಭಾಂಶವನ್ನಾಗಲೀ ನೀಡದೆ ವಂಚಿಸಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago