ಉಡುಪಿ : ಆನ್ ಲೈನ್ ಮೂಲಕ ಹಣ ಕಳೆದುಕೊಂಡು ಮಹಿಳೆಯೊಬ್ಬರು ವಂಚನೆಗೊಳಗಾಗಿರುವ ಘಟನೆ ನಡೆದಿದೆ.
ದುಬೈಯಲ್ಲಿ ವಾಸವಾಗಿರುವ ಗುಂಡಿಬೈಲು ಮೂಲದ ನಿವಾಸಿ ಕ್ಲೊಟಿಲ್ಡಾ ಡಿಕೊಸ್ತಾ (68) ಎಂಬವರು ಊರಿಗೆ ಬಂದಿದ್ದು, ಇವರಿಗೆ ಡಿ.2ರಂದು ಮೇಸೆಂಜರ್ ಮೂಲಕ ರೊಮಾನಿಯ ದೇಶದ ಇಂಗ್ಲೆಂಡ್‌ನಲ್ಲಿ ವೈದ್ಯಕೀಯ ವೃತ್ತಿ ಮಾಡಿಕೊಂಡಿರುವುದಾಗಿ ಹೇಳಿಕೊಂಡ ಫಿಲಿಪ್ ಜೇಮ್ಸ್ ಎಂಬಾತನ ಪರಿಚಯ ವಾಗಿತ್ತು. ಈತ ವಾಟ್ಸ್ ಆಪ್ ಕರೆ ಮಾಡಿ , ಮೆಸೇಜ್ ಮೂಲಕ ಮಾತನಾಡುತ್ತಿದ್ದ.
ಡಿ.20ರಂದು ಫಿಲಿಪ್ ಜೇಮ್ಸ್ ತಾನು ನವದೆಹಲಿ ವಿಮಾನ ನಿಲ್ದಾಣದಲ್ಲಿ ಇದ್ದು, ತನ್ನನ್ನು ಕಸ್ಟಮ್ ನವರು ಹಿಡಿದಿಟ್ಟಿದ್ದಾರೆ, ನನಗೆ ಡಾಲರ್‌ನ್ನು ಇಂಡಿಯನ್ ಕರೆನ್ಸಿಗೆ ಬದಲಾಯಿಸಲು ಆಗುವುದಿಲ್ಲ ಎಂದು ಕ್ಲೊಟಿಲ್ಡಾ ಡಿಕೋಸ್ತ ನಂಬಿಸಿದನು. ಹೀಗೆ ಮೋಸದಿಂದ ಆತ ಕ್ಲೊಟಿಲ್ಡಾ ಅವರಿಂದ ಹಂತಹಂತವಾಗಿ ಒಟ್ಟು 13,70,042 ರೂ. ಹಣವನ್ನು ಖಾತೆಗೆ ಹಾಕಿಸಿ, ಬಳಿಕ ಯಾವುದೇ ಕರೆಗಳನ್ನು ಸ್ವೀಕರಿಸದೆ ವಂಚನೆ ಮಾಡಿದ್ದಾನೆ ಎಂದು ದೂರಲಾಗಿದ್ದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…