Featured

ಉಡುಪಿ : ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾ ಆರೋಗ್ಯ ಯೋಜನೆ – ಸೌಲಭ್ಯ ಪಡೆಯುವ ವಿಧಾನ – Vishwnaews24

ಉಡುಪಿ : ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾ ಆರೋಗ್ಯ ಯೋಜನೆ – ಸೌಲಭ್ಯ ಪಡೆಯುವ ವಿಧಾನ

ಉಡುಪಿ : ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾ ಆರೋಗ್ಯ ಯೋಜನೆ ಕಾರ್ಡ್ಗಳ ಮೂಲಕ ದೇಶದಾದ್ಯಂತ ನೋಂದಾಯಿತ ಆಸ್ಪತ್ರ‍್ರೆಗಳಲ್ಲಿ ಚಿಕಿತ್ಸೆ ಸೌಲಭ್ಯ ಪಡೆಯಲು ಅನುಕೂಲಕರವಾಗಿದ್ದು, ಸಾರ್ವಜನಿಕರು ಈ ಯೋಜನೆಯ ಸೌಲಭ್ಯ ಪಡೆಯಲು ತಮ್ಮ ಹತ್ತಿರದ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಸೆಂಟರ್‌ಗಳ ಮೂಲಕ ನೋಂದಾವಣೆ ಮಾಡಬಹುದಾಗಿದೆ.

ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆಯ ಆಸ್ಪತ್ರೆಗಳಿಗೆ ಆನ್‌ಲೈನ್ ಮೂಲಕ ರೆಫೆರಲ್ ನೀಡಲು MHPOAA ಕಾರ್ಡ್ಗಳು ಅವಶ್ಯವಿದ್ದು, ಆಧಾರ್ ಕಾರ್ಡ್ಗೆ ಜೋಡಣೆಯಾಗಿರುವ ಮೊಬೈಲ್ ನಂಬರ್, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಆಧಾರದ ಮೇಲೆ MHPOAA ಕಾರ್ಡ್ಗಳನ್ನು ನೋಂದಾವಣೆ ಮಾಡಲಾಗುವುದು.

ಈ ಕಾರ್ಡಿನಲ್ಲಿ ಆಭಾ (ಆಯುಷ್ಮಾ಼಼಼ನ್ ಭಾರತ್ ಹೆಲ್ತ್ ಅಕೌಂಟ್) 14 ಸಂಖ್ಯೆಯ ನಂಬರ್ ಇರುವುದರಿಂದ ರೋಗಿಯ ಆರೋಗ್ಯ ದತ್ತಾಂಶವನ್ನು ಸಂಗ್ರಹಿಸಲು ಅವಕಾಶ ಕಲ್ಪಿಸಲಾಗಿದ್ದು, ಇದರಿಂದ ಚಿಕಿತ್ಸೆ ಸಂದರ್ಭದಲ್ಲಿ ರೋಗಿಯ ಹಿಂದಿನ ಚಿಕಿತ್ಸೆಯ ದತ್ತಾಂಶ ದೊರೆತು ಶೀಘ್ರವಾಗಿ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ.

ಅರ್ಹತೆ ಮತ್ತು ಚಿಕಿತ್ಸಾ ಮೊತ್ತ: ಬಿ.ಪಿ.ಎಲ್ ಪಡಿತರ ಕಾರ್ಡ್ ಹೊಂದಿರುವವರು ಮತ್ತು ರಾಷ್ಟಿçÃಯ ಸ್ವಾಸ್ಥö್ಯಭೀಮಾ ಯೋಜನೆಯಲ್ಲಿ (ಖSಃಙ) ನೋಂದಾಯಿತರಾಗಿರುವ ಫಲಾನುಭವಿಗಳು ವಾರ್ಷಿಕ ಕುಟುಂಬಕ್ಕೆ ತಲಾ 5,00,000 ರೂ ವರೆಗೂ ನೋಂದಾಯಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ಎ.ಪಿ.ಲ್ ಕಾರ್ಡ್ದಾರರು ಅಥವಾ ಬಿ.ಪಿ.ಎಲ್ ಕಾರ್ಡ್ ಹೊಂದಿಲ್ಲದವರು ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇ. 30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಪ್ರತಿ ಕುಟುಂಬಕ್ಕೆ 1,50,000 ರೂ ವರೆಗೆ ಪಡೆಯಬಹುದಾಗಿದೆ.

ಈ ಯೋಜನೆಯಲ್ಲಿ ರೋಗಗಳ ಚಿಕಿತ್ಸೆಯನ್ನು 4 ಹಂತದಲ್ಲಿ ವಿಭಜಿಸಲಾಗಿದ್ದು, ಚಿಕಿತ್ಸಾ ಕೋಡ್‌ಗಳಾದ ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು (2ಎ), ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು (2ಬಿ), ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು (3ಎ) ಮತ್ತು ತುರ್ತು ಚಿಕಿತ್ಸೆ 169 ಚಿಕಿತ್ಸಾ ವಿಧಾನಗಳು ಮತ್ತು 36 ಉಪಚಿಕಿತ್ಸಾ ವಿಧಾನಗಳು (4ಎ) ಆಗಿದ್ದು, ಒಟ್ಟು 1650 ಚಿಕಿತ್ಸಾ ಕೋಡುಗಳು ಮತ್ತು 8 ಕೋವಿಡ್ ಕೋಡುಗಳು ಲಭ್ಯವಿರುತ್ತದೆ.’

ಯೋಜನೆಯ ಸೌಲಭ್ಯ ಪಡೆಯುವ ವಿಧಾನ:

ಯಾವುದೇ ವ್ಯಕ್ತಿಗೆ ರೋಗ ಲಕ್ಷಣಗಳು ಕಂಡು ಬಂದಲ್ಲಿ ಪ್ರಥಮವಾಗಿ ಹತ್ತಿರದ ಸರಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಬೇಕು. ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುವುದು. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಖಾಯಿಲೆಗಳಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದಲ್ಲಿ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಛಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯಬಹುದಾಗಿದ್ದು, ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೇ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ.

ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿನ ಆರೋಗ್ಯ ಮಿತ್ರರನ್ನು ಅಥವಾ ಆರೋಗ್ಯ ಸಹಾಯವಾಣಿ 104 ಮತ್ತು 14555 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಅಥವಾ ಜಿಲ್ಲೆಯ ಆರೋಗ್ಯ ಮಿತ್ರರಾದ ಉಡುಪಿ ಜಿಲ್ಲಾ ಆಸ್ಪತ್ರೆಯ ಪುಷ್ಪ ಜೆ ಶೆಟ್ಟಿ ಮೊ.ನಂ: 9480819591, ಉಡುಪಿಯ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸುಜನ್ ಮಾಲ ಎ ಮೊ.ನಂ:9480819596 ಹಾಗೂ ಹರೀಶ್ ಎಸ್ ಮೊ.ನಂ: 9480819597, ಕಾರ್ಕಳ ಸಾರ್ವಜನಿಕ ಆಸ್ಪತ್ರೆಯ ಚೇತನ್ ಪ್ರಭು ಮೊ.ನಂ: 9480819592, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ರಜನಿ ಮೊ.ನಂ: 8088036117, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಕಿರಣ್ ಕುಮಾರ್ ಮೊ.ನಂ: 7348806832, ಮಣಿಪಾಲ ಕೆ.ಎಂ.ಸಿ ಯ ಮೇಘಶ್ರೀ ಆಚಾರ್ಯ ಮೊ.ನಂ: 9480819595, ನಾಗರತ್ನ ಕುಕ್ಕುಜೆ ಮೊ.ನಂ: 9480819593, ಶೋಭಾ ಡಿ ಮೊ.ನಂ: 9480819594, ಚೆನ್ನಕೇಶವ ಮೊ.ನಂ: 7349725183 ಹಾಗೂ ವಿನೋದ್ ಮೊ.ನಂ: 8431194639 ಮತ್ತು ನಗರದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಜಿಲ್ಲಾ ಸಂಯೋಜಕಿ ಡಾ. ತೇಜಸ್ವಿನಿ ಎ ಮೊ.ನಂ: 9480819766 ಅನ್ನು ಸಂಪರ್ಕಿಸಬಹುದಾಗಿದೆ.

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾ ಆರೋಗ್ಯ ಯೋಜನೆ ಕಾರ್ಡ್ಗಳನ್ನು ಪಡೆಯುವಲ್ಲಿ ಯಾವುದೇ ಸಂದೇಹಗಳಿದ್ದಲ್ಲಿ ಹತ್ತಿರದ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

10 minutes ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

23 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

23 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

23 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago