ಉಡುಪಿ : ‘ಆಯುಷ್ಮಾನ್ ಭಾರತ್’ ಯೋಜನೆಯಡಿ ನೊಂದಾಯಿತ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಯು ಸಂಪೂರ್ಣವಾಗಿ ಉಚಿತವಾಗಿದೆ. ಸಾರ್ವಜನಿಕರು ‘ಆಯುಷ್ಮಾನ್ ಭಾರತ್’ ಯೋಜನೆಯ ನೊಂದಾಯಿತ ಆಸ್ಪತ್ರೆಗಳಲ್ಲೇ ಕೊರೋನಾ ಚಿಕಿತ್ಸೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಇತ್ತೀಚೆಗೆ ಕೊರೋನಾ ವಿಚಾರವಾಗಿ ಆಧಾರ ರಹಿತ ಆರೋಪಗಳು ಕೇಳಿಬರುತ್ತಿವೆ. ಇವೆಲ್ಲವೂ ಸತ್ಯಕ್ಕೆ ದೂರವಾಗಿದ್ದು ಜನತೆ ವದಂತಿಗಳಿಗೆ ಕಿವಿಗೊಡದೆ ಸರಕಾರದ ಆರೋಗ್ಯ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವುದು ಇಂದಿನ ಅಗತ್ಯತೆಯಾಗಿದೆ ಎಂದರು.
ಪ್ರತೀ ಗ್ರಾ.ಪಂ., ತಾ.ಪಂ., ಜಿ.ಪಂ. ಮಟ್ಟದಲ್ಲಿ ಕಾಲಕಾಲಕ್ಕೆ ಕೊರೋನಾ ಕಾರ್ಯಪಡೆಯ ಸಭೆಗಳನ್ನು ನಡೆಸಿ ಅಗತ್ಯ ತುರ್ತು ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವುದು ಅವಶ್ಯಕವಾಗಿದೆ. ಕೊರೋನಾ ವಾರಿಯರ್ಸ್‍ಗಳಿಗೆ ಸಹಕರಿಸುವ ಜೊತೆಗೆ ಸ್ವಯಂ ಜಾಗೃತಿ ಹಾಗೂ ಆರೋಗ್ಯ ಸುರಕ್ಷಾ ನಿಯಮಗಳನ್ನು ಪಾಲಿಸುವ ಮೂಲಕ ಕೊರೋನಾ ಸಂಕಷ್ಟದಿಂದ ಪಾರಾಗೋಣ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…