ಉಡುಪಿ: ಅಜೆಕಾರಿನ ದೇಪ್ಪುಟ್ಟೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಿಲೀಪ್ ಹೆಗ್ಡೆಯು ಜೂನ್ ತಿಂಗಳಿನಲ್ಲಿ ಉಡುಪಿ ಗ್ರಾಮಾಂತರದ ಖಾಸಗಿ ಲ್ಯಾಬ್‌ನಲ್ಲಿ ವಿಷ ಸೇವಿಸಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.
ಆರೋಪಿಯು ತಾನು ವೈದ್ಯಕೀಯ ವಿದ್ಯಾರ್ಥಿಯಂತೆ ನಟಿಸಿ ತನ್ನ ಲ್ಯಾಬ್‌ನ ಬಳಕೆಗೆ ಬೇಕೆಂದು ಲ್ಯಾಬ್‌ನವರನ್ನು ನಂಬಿಸಿ ಆತ “ಆರ್ಸೆನಿಕ್ ಟ್ರೈ ಆಕ್ಸೈಡ್” ಖರೀದಿಸಿದ್ದ. ಈ ಮೂಲಕ ಆರೋಪಿಗಳು ಬಾಲಕೃಷ್ಣ ಪೂಜಾರಿ ಹತ್ಯೆಗೆ ಐದು ತಿಂಗಳ ಹಿಂದೆಯೆ ಯೋಜನೆ ರೂಪಿಸಿದ್ದರು ಎಂಬುದು ತಿಳಿದುಬಂದಿದೆ.
ವಿಷ ಮಾರಾಟ ಮಾಡಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಪೊಲೀಸರು ಲ್ಯಾಬ್ ಮಾಲೀಕರನ್ನು ವಿಚಾರಣೆಗೊಳಪಡಿಸಿದ್ದಾರೆ. ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಒಳಪಡಿಸುವುದಾಗಿ ಉಡುಪಿ ಎಸ್‌ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಮುಂಬೈನಲ್ಲಿ ಬೆಳೆದು ಶಿಕ್ಷಣ ಪಡೆದಿದ್ದ ಆರೋಪಿ ದಿಲೀಪ್ ಹೆಗ್ಡೆ ಅವರು ಸಾಮಾಜಿಕವಾಗಿ ಸಕ್ರಿಯರಾಗಿರಲಿಲ್ಲ. ಬಿಕಾಂ ಪದವಿ ಪಡೆದಿರುವ ಆತ, ಕೆಲವು ವರ್ಷಗಳ ಹಿಂದೆ ಕಾರ್ಕಳದಲ್ಲಿ ಆತನ ಕುಟುಂಬ ಹೊಸ ಉದ್ದಿಮೆ ಆರಂಭಿಸಿದಾಗ ಊರಿಗೆ ಮರಳಿ ಬಂದು ಉದ್ಯಮದಲ್ಲಿ ತೊಡಗಿಕೊಂಡಿದ್ದ.
ಗೂಗಲ್ ಸರ್ಚ್ ಮುಲಕವೇ ಆರ್ಸೆನಿಕ್ ಟ್ರೈ ಆಕ್ಸೈಡ್ ಬಗ್ಗೆ ಆರೋಪಿ ಮಾಹಿತಿ ಪಡೆದಿದ್ದ. ಜೊತೆಗೆ ಸಾಮಾಜಿಕ ಜಾಲತಾಣ, ಸಿನೆಮಾ ಅಥವಾ ಗೆಳೆಯರ ಮೂಲಕ ಈ ವಿಷ ಪದಾರ್ಥದ ಕುರಿತು ಮಾಹಿತಿ ದೊರೆತಿರಬಹುದೇ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…