ಉಡುಪಿ : ಉಡುಪಿ ಜಿಲ್ಲೆಯ ನೇಜಾರು ನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಸುದ್ದಿಗೋಷ್ಟಿ ನಡೆಸಿದ್ದು ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಾನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಪಿ ಪ್ರವೀಣ್ ಅರುಣ್ ಚೌಗುಲೆ ಮಹಾರಾಷ್ಟ ಮೂಲದ ಸಾಂಗ್ಲಿಯವರಾಗಿದ್ದು, ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಎರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ ಎಂದು ಹೇಳಿದರು. ಕೊಲೆಗೆ ಕಾರಣ ಏನು ಎಂಬುದನ್ನು ವಿಚಾರಣೆಯಲ್ಲಿ ಪಡೆದುಕೊಳ್ಳುತ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆಗಳಿವೆ.
ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ. ಆರೋಪಿ ತಪ್ಪೋಪ್ಪಿಗೆ ಕೊಟ್ಟಿದ್ದಾನೆ. ಆರೋಪಿ ಉದ್ದೇಶ ಅಯ್ನಾಝ್ ಎಂಬಾಕೆಯನ್ನು ಕೊಲೆ ಮಾಡುವುದಾಗಿತ್ತು. ಆದರೆ ಕೊಲೆ ಮಾಡುವ ವೇಳೆ ಮನೆಯವರು ಅಡ್ಡ ಬಂದಿದ್ದಕ್ಕೆ ಅವರನ್ನು ಕೊಲೆ ಮಾಡಿದ್ದಾನೆ. ಆರೋಪಿ ತಪ್ಪಿಸಿಕೊಳ್ಳಲು ಮತ್ತು ಸಾಕ್ಷ್ಯ ನಾಶ ಮಾಡುವ ಸಲುವಾಗಿ ಎಲ್ಲರನ್ನೂ ಕೊಲೆ ಮಾಡಿರುವ ಬಗ್ಗೆ ತಪ್ಪೋಪ್ಪಿಗೆ ನೀಡಿದ್ದಾನೆ ಎಂದು ಹೇಳಿದ್ದಾರೆ.
ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿತ್ತು. ಸದ್ಯ ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ. ಕೋರ್ಟ್ ಗೆ ಇವತ್ತೇ ಹಾಜರು ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…