ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ
ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು, ವೃದ್ಧ ದಂಪತಿಯ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿರುವ ಘಟನೆ ಉಡುಪಿಯ ಬಡನಿಡಿಯೂರು ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ 69 ವರ್ಷದ ಸರಸು ಸುವರ್ಣ ಅವರು ನೀಡಿದ ದೂರಿನ ಮೇರೆಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರಸು ಸುವರ್ಣ ಅವರು ತಮ್ಮ ಎರಡನೇ ಮಗ ವಿನೋದ ಸುವರ್ಣನೊಂದಿಗೆ ಬಡನಿಡಿಯೂರಿನ ಮನೆಯಲ್ಲಿ ವಾಸವಾಗಿದ್ದರು. ಈ ಮನೆಯು ಸರಸು ಅವರ ಹೆಸರಿನಲ್ಲೇ ಇತ್ತು. ವಿನೋದ ಪದೇಪದೇ ಆ ಮನೆಯನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ತಾಯಿಯನ್ನು ಒತ್ತಾಯಿಸುತ್ತಿದ್ದನು. ತಾಯಿ ಇದಕ್ಕೆ ಒಪ್ಪದಿದ್ದಾಗ, ವಿನೋದ ಆಕೆಯ ಮೇಲೆ ಮತ್ತು ತಂದೆ ದಾಸು ತಿಂಗಳಾಯ ಅವರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24
ಅಲ್ಲದೆ, ವಿನೋದ ಅವರನ್ನು ಬಲವಂತವಾಗಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಕರೆದೊಯ್ದು, ಅವರ ಇಚ್ಛೆಗೆ ವಿರುದ್ಧವಾಗಿ 11 ಸೆಂಟ್ಸ್ ಜಮೀನು ಮತ್ತು ಮನೆಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಂಡಿದ್ದಾನೆ. ಈ ವಿಷಯವನ್ನು ಯಾರಿಗೂ ಹೇಳದಂತೆ ತಾಯಿಯನ್ನು ಬೆದರಿಸಿದ್ದನು ಎಂದು ಆರೋಪಿಸಲಾಗಿದೆ.
ನಂತರ, ಸರಸು ಸುವರ್ಣ ಅವರು ಈ ಕುರಿತು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವುದನ್ನು ತಿಳಿದ ವಿನೋದ, ಕೋಪಗೊಂಡು ತಾಯಿ ಸರಸು, ತಂದೆ ದಾಸು ಮತ್ತು ಸಹೋದರಿ ವಿನುತಾ ಅವರನ್ನು ಮನೆಯಿಂದ ಹೊರಹಾಕಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.
