Featured

ಉಡುಪಿ: ಆಸ್ಪತ್ರೆಗಳಲ್ಲಿ ಇ.ಎಸ್.ಐ. ಸೌಲಭ್ಯ ಪದೇ ಪದೇ ವ್ಯತ್ಯಯ : ಶಾಸಕ ಯಶ್ ಪಾಲ್ ಆಕ್ರೋಶ – vishwanews24

ಉಡುಪಿ: ಆಸ್ಪತ್ರೆಗಳಲ್ಲಿ ಇ.ಎಸ್.ಐ. ಸೌಲಭ್ಯ ಪದೇ ಪದೇ ವ್ಯತ್ಯಯ : ಶಾಸಕ ಯಶ್ ಪಾಲ್ ಆಕ್ರೋಶ

ಉಡುಪಿ: ಕಳೆದ ಹಲವು ತಿಂಗಳುಗಳಿಂದ ಖಾಸಗಿ ಆಸ್ಪತ್ರೆಗಳಲ್ಲಿ ಇ.ಎಸ್.ಐ. ಸೌಲಭ್ಯ ಹಲವಾರು ಬಾರಿ ವ್ಯತ್ಯಯವಾಗಿ ಇ.ಎಸ್.ಐ. ನೋಂದಾಯಿತ ನೌಕರರು ಮತ್ತು ಅವಲಂಬಿತ ಕುಟುಂಬಗಳು ತೊಂದರೆಗೀಡಾಗಿವೆ. ಖಾಸಗಿ ಆಸ್ಪತ್ರೆಗಳೊಂದಿಗಿನ ರಾಜ್ಯ ಸರಕಾರದ ಒಡಂಬಡಿಕೆಯು ನವೀಕರಣಗೊಳ್ಳದೆ ಸದ್ರಿ ಸಮಸ್ಯೆ ರಾಜ್ಯಾದ್ಯಂತ ಉದ್ಭವಿಸಿರುವುದಾಗಿ ಮಾಹಿತಿ ನೀಡಲಾಗಿರುತ್ತದೆ. ಇ.ಎಸ್.ಐ. ಸೌಲಭ್ಯವನ್ನು ನಂಬಿಕೊಂಡ ಬಡ ರೋಗಿಗಳು ಸೌಲಭ್ಯ ನಿರಾಕರಣೆಯಿಂದ ಆಗಾಗ ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ಉಡುಪಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಇ.ಎಸ್.ಐ. ಯೋಜನೆಯಡಿ ನಗದು ರಹಿತ ಚಿಕಿತ್ಸೆಯು ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದೆ. ಇ.ಎಸ್.ಐ. ಸೌಲಭ್ಯ ಸಿಗದೆ ಜಿಲ್ಲೆಯ ಅನೇಕ ಕಾರ್ಮಿಕರು, ನೌಕರರು ಹಾಗೂ ಉದ್ಯೋಗಿಗಳು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರು ತೊಂದರೆಗೀಡಾಗಿದ್ದಾರೆ.

ಅರ್ಹ ಕಾರ್ಮಿಕರ ಆರೋಗ್ಯ ರಕ್ಷಣೆ ಸರ್ಕಾರದ ಸಾಮಾಜಿಕ ಜವಾಬ್ದಾರಿಯಾಗಿದೆ. ಬಡ ಕುಟುಂಬಗಳ ಜೀವದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿರುವುದು ಖಂಡನೀಯ. ಇ.ಎಸ್.ಐ. ಯೋಜನೆಯು ಯಾವುದೇ ಅಡಚರಣೆಗಳಿಲ್ಲದೆ ನಿರಂತರವಾಗಿ ಫಲಾನುಭವಿಗಳಿಗೆ ದೊರಕುವಂತೆ ಮಾಡಿ ಸದಿ ಸಮಸ್ಯೆಗೆ ಸರಕಾರ ಶೀಘ್ರವಾಗಿ ಖಾಯಂ ಪರಿಹಾರ ಕೈಗೊಳ್ಳುವಂತೆ ಶಾಸಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago