ಉಡುಪಿ: ಪಕ್ಷ ಸಂಘಟನೆ ಮತ್ತು ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಆಶೀರ್ವಾದ ಯಾತ್ರೆ ಸಮಾವೇಶ’ ಹಾಗೂ ನೂತನ ‘ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ಅಭಿನಂದನಾ ಸಮಾರಂಭವು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆ.16, ಸೋಮವಾರ ಉಡುಪಿ ಪುರಭವನದಲ್ಲಿ ನಡೆಯಲಿದೆ.
ಈ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಗಳ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕೇಂದ್ರ ಸಚಿವರನ್ನು ಬೆಳಿಗ್ಗೆ ಗಂಟೆ 11.00ಕ್ಕೆ ಉಡುಪಿ ಜಿಲ್ಲಾ ವ್ಯಾಪ್ತಿಯ ಹೆಜಮಾಡಿಯಲ್ಲಿ ಸ್ವಾಗತಿಸಿ, ಕಾಪು ಮೂಲಕ ಬರಮಾಡಿ ಕೊಳ್ಳಲಾಗುವುದು.
ಸಚಿವರು ಮಧ್ಯಾಹ್ನ ಗಂಟೆ 1.30ಕ್ಕೆ ಉಡುಪಿ ಶ್ರೀ ಕೃಷ್ಣ ಮಠವನ್ನು ಸಂದರ್ಶಿಸಿ, 2.00 ಗಂಟೆಗೆ ಸ್ವಾಮೀಜಿಯವರ ದರ್ಶನಗೈದು, 2.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಲಿದ್ದಾರೆ. ಮಧ್ಯಾಹ್ನ 3.00 ಗಂಟೆಗೆ ಪೆರ್ಡೂರಿನಲ್ಲಿ ಮತ್ತು 3.30ಕ್ಕೆ ಹೆಬ್ರಿಯಲ್ಲಿ ಕೇಂದ್ರ ಸಚಿವರನ್ನು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸ್ವಾಗತಿಸಲಿದ್ದಾರೆ. ಸಂಜೆ 5.00ಕ್ಕೆ ಸಚಿವರು ಶ್ರೀ ಶೃಂಗೇರಿ ಮಠವನ್ನು ಸಂದರ್ಶಿಸಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…