Featured

ಉಡುಪಿ: ಆ.2ರಂದು 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭ – vishwanews24

ಉಡುಪಿ: ಆ.2ರಂದು 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಅನುದಾನಿತಾ ಶಾಲೆಗಳ ಸಂಘದ ಸಹಯೋಗದಲ್ಲಿ ಉಡುಪಿ ಜಿಲ್ಲೆಯಲ್ಲಿ 200 ಅನುದಾನಿತ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ (ಆ. 2ರಂದು) ಬೆಳಿಗ್ಗೆ 10:30ಕ್ಕೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಉಪಾಧ್ಯಕ್ಷ ನಾಗರಾಜ ಶೆಟ್ಟಿ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಯಶಪಾಲ್‌ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಎಚ್.ಎಸ್.ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಉಪಕುಲಪತಿ, ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅಶೋಕ್ ಎಸ್ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ಇಂದಿರಾ ಹಾಲಂಬಿ ಅವರಿಗೆ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

22 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

22 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

23 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

23 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago