Featured

ಉಡುಪಿ:  ಆ.25ರಿಂದ ಸೆ.7ರ ವರೆಗೆ ಕನ್ನರ್ಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯಿಂದ “20ನೇ ವರ್ಷದ ವೈಭವದ ಗಣೇಶೋತ್ಸವ” – vishwanews24

ಉಡುಪಿ:  ಆ.25ರಿಂದ ಸೆ.7ರ ವರೆಗೆ ಕನ್ನರ್ಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯಿಂದ “20ನೇ ವರ್ಷದ ವೈಭವದ ಗಣೇಶೋತ್ಸವ”

ಉಡುಪಿ: ಕಿನ್ನಿಮೂಲ್ಕಿಯ ಕನ್ನರ್ಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯಿಂದ 20ನೇ ವರ್ಷದ ಗಣೇಶೋತ್ಸವವನ್ನು ಆ.25ರಿಂದ ಸೆ.7ರ ವರೆಗೆ 14 ದಿನಗಳ ಕಾಲ ಅತ್ಯಂತ ವೈವಿಧ್ಯಮಯ ಮತ್ತು ವೈಭವದಿಂದ ಆಚರಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅ.25ರಂದು ಸಂಜೆ ಜೋಡುಕಟ್ಟೆಯಿಂದ ಗಣಪತಿ ಮೈದಾನದ ವರೆಗೆ ಭಕ್ತರ ಭವ್ಯ ಮೆರವಣಿಗೆಯೊಂದಿಗೆ ಈ ಬಾರಿ ಗಣೇಶೋತ್ಸವ ಆರಂಭವಾಗಲಿದೆ. ಗಣೇಶೋತ್ಸವವನ್ನು ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ನಾಡೋಜಿ ಜಿ.ಶಂಕರ್ ಸಭಾಧ್ಯಕ್ಷತೆ ವಹಿಸಲಿದ್ದು, ಸ್ವೀಕರ್ ಯು.ಟಿ.ಖಾದರ್ ಮ್ಯೂಸಿಯಂ ಉದ್ಘಾಟಿಸಲಿದ್ದಾರೆ. ವಿ.ಪ. ಸದಸ್ಯರಾದ ಐವನ್ ಡಿಸೋಜ ಉಗ್ರಾಣ ಮುಹೂರ್ತ, ಮಂಜುನಾಥ ಭಂಡಾರಿ ಧ್ವಜಾರೋಹಣ, ಮಾಜಿ ಸಚಿವ ವಿನಯಕುಮಾರ್ ಸೊರಕೆ ವಿದ್ಯುದ್ದೀಪ ಅಲಂಕಾರ ಅನಾವರಣಗೊಳಿಸಲಿದ್ದಾರೆ. ಮಾಜಿ ಲೋಕಸಭಾ ಸದಸ್ಯ ಜಯಪ್ರಕಾಶ್ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಅನೇಕ ಗಣ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಆ.26ರಂದು ಧಾರ್ಮಿಕ ಸಭೆಯನ್ನು ಅದಮಾರು ಶ್ರೀ ವಿಶ್ವಪ್ರಿಯ ತೀರ್ಥರು ಉದ್ಘಾಟಿಸಲಿದ್ದಾರೆ. ಶಾಸಕ ಯತ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಆ.27 ರಂದು ಗಣೇಶನ ವಿಗ್ರಹ ಸ್ಥಾಪನೆ, ಪ್ರಾಣಪ್ರತಿಷ್ಠೆ, ಆ.28 ರಂದು 108 ಕಾಯಿ ಗಣಯಾಗ, ಆ.29ರಂದು ಲಕ್ಷ್ಮೀ ಗಣಪತಿ ಹೋಮ, ಆ.30ರಂದು ಸಹಸ್ರಮೋದಕ ಗಣಯಾಗ, ಆ.31ರಂದು ಪ್ರಸನ್ನಗಣಪತಿ ಹೋಮ, ಸೆ.1ರಂದು ಬಾಲಗಣಪತಿ ಹೋಮ, ಸೆ.2ರಂದು 1008 ಕಾಯಿ ಗಣಯಾಗ, ಸೆ.3ರಂದು ಏಕಾದಶಿ, ಸೆ.4ರಂದು 108 ಕಾಯಿ ಗಣಯಾಗ, ಸೆ.5ರಂದು ಹರಿದ್ರಾಗಣಪತಿ ಯಾಗ ನಡೆಯಲಿವೆ. ಸೆ.6ರಂದು ಅಥರ್ವಶೀರ್ಷ ಗಣಯಾಗ, ಸಂಜೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮನರಂಜಿಸಲಿವೆ ಎಂದು ತಿಳಿಸಿದರು.

ಸೆ.7ರಂದು ಋಣಮೋಚನಾ ಹೋಮ, ಸಂಜೆ 7 ಗಂಟೆಗೆ ಗಣಪತಿ ವಿಸರ್ಜನ ಮೆರವಣಿಗೆ ನಡೆಯಲಿದೆ. ಈ ವೈಭವದ ಮೆರವಣಿಗೆಯಲ್ಲಿ 50ಕ್ಕೂ ಹೆಚ್ಚು ಟ್ಯಾಬ್ಲೊಗಳು, ವಾದ್ಯ ವೈವಿಧ್ಯಗಳು ಮತ್ತು ಸಹಸ್ರಾರು ಭಕ್ತರು ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಶೇರಿಗಾರ್ ಕನ್ನರ್ಪಾಡಿ, ಕಾರ್ಯದರ್ಶಿಗಳಾದ ನವೀನ್ ಶೆಟ್ಟಿ ಒಡ್ಡಾಡಿ, ರವೀಂದ್ರ ಶೆಟ್ಟಿ ಬಾಣಬೆಟ್ಟು ಕೋಶಾಧಿಕಾರಿ ಪ್ರಶಾಂತ್ ಆಚಾರ್ಯ ಕಿನ್ನಿಮುಲ್ಕಿ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago