ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ 227ನೇ ರಾಯಣ್ಣ ಉತ್ಸವ, ಕುಂಭ ಮೆರವಣಿಗೆ ಕಾರ್ಯಕ್ರಮ ಇದೇ ಆ.27ರಂದು ಉಡುಪಿಯ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ ಹೇಳಿದರು.
ಉಡುಪಿಯಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಬೈಲಹೊಂಗಲದ ದುರ್ಗಾದೇವಿ ದೇವಸ್ಥಾನದ ಧರ್ಮದರ್ಶಿ ಮಹಾಂತಯ್ಯ ಸ್ವಾಮಿ ಆಶೀರ್ವಚನ ನೀಡಲಿದ್ದಾರೆ.
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಉತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದರು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ, ಕರ್ನಾಟಕ ಸರಕಾರದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿರುವರು ಎಂದರು.
ಸಮಾಜ ಸೇವಕ ಆಪತ್ಬಾಂಧವ ಈಶ್ವರ್ ಮಲ್ಪೆ ಅವರಿಗೆ ಸಂಸ್ಥಾಪಕ ಅಧ್ಯಕ್ಷರಾದ ಸುರೇಶ್ ಗೋಕಾಕ್ 2023 ರ ರಾಯಣ್ಣ ಪುರಸ್ಕಾರ ಪ್ರದಾನ ಮಾಡಲಿದ್ದಾರೆ ಎಂದರು.
ಬನ್ನಂಜೆ ನಾರಾಯಣಗುರು ಮಂದಿರದಿಂದ ರಥಬೀದಿಯ ಕನಕ ಗೋಪುರದವರೆಗೆ ಕುಂಭ ಮೆರವಣಿಗೆ ನಡೆಯಲಿದೆ ಎಂದರು.
ಕರ್ನಾಟಕದಲ್ಲಿ ಪ್ರಥಮ ಬಾರಿಗೆ ರೂಬಿಕ್ಸ್ ಕ್ಯೂಬ್ ನಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರವನ್ನು ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಗಿನ್ನಿಸ್ ರೆಕಾರ್ಡ್ ದಾಖಲೆಯ ಪ್ರಥ್ವಿಶ್ ಕೆ.ಭಟ್ ಇವರು ರಚಿಸಲಿದ್ದಾರೆ
ಪತ್ರಿಕಾಗೋಷ್ಠಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಗೌರವಾಧ್ಯಕ್ಷ ಜನಾರ್ದನ್ ಕೊಡವೂರು, ಗೌರವ ಸಲಹೆಗಾರ ಕೃಷ್ಣ ಶೆಟ್ಟಿಬೆಟ್ಟು, ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್, ಕಾರ್ಯದರ್ಶಿ ವಿಠ್ಠಲ್ ಗೌಡರ್, ಕೋಶಾಧಿಕಾರಿ ಪಂಪೇಶ್ ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…