Featured

ಉಡುಪಿ : ಆ. 27ರಂದು 227ನೇ ರಾಯಣ್ಣ ಉತ್ಸವ, ಕುಂಭ ಮೆರವಣಿಗೆ: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ – Vishwanews24

ಆ. 27ರಂದು 227ನೇ ರಾಯಣ್ಣ ಉತ್ಸವ, ಕುಂಭ ಮೆರವಣಿಗೆ: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ

ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ 227ನೇ ರಾಯಣ್ಣ ಉತ್ಸವ, ಕುಂಭ ಮೆರವಣಿಗೆ ಕಾರ್ಯಕ್ರಮ ಇದೇ ಆ.27ರಂದು‌ ಉಡುಪಿಯ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ ಹೇಳಿದರು.

ಉಡುಪಿಯಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಬೈಲಹೊಂಗಲದ ದುರ್ಗಾದೇವಿ ದೇವಸ್ಥಾನದ ಧರ್ಮದರ್ಶಿ ಮಹಾಂತಯ್ಯ ಸ್ವಾಮಿ ಆಶೀರ್ವಚನ ನೀಡಲಿದ್ದಾರೆ.

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಉತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದರು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ, ಕರ್ನಾಟಕ ಸರಕಾರದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿರುವರು ಎಂದರು.

ಸಮಾಜ ಸೇವಕ ಆಪತ್ಬಾಂಧವ ಈಶ್ವರ್ ಮಲ್ಪೆ ಅವರಿಗೆ ಸಂಸ್ಥಾಪಕ ಅಧ್ಯಕ್ಷರಾದ ಸುರೇಶ್ ಗೋಕಾಕ್ 2023 ರ ರಾಯಣ್ಣ ಪುರಸ್ಕಾರ ಪ್ರದಾನ ಮಾಡಲಿದ್ದಾರೆ ಎಂದರು.

ಬನ್ನಂಜೆ ನಾರಾಯಣಗುರು ಮಂದಿರದಿಂದ ರಥಬೀದಿಯ ಕನಕ ಗೋಪುರದವರೆಗೆ ಕುಂಭ ಮೆರವಣಿಗೆ ನಡೆಯಲಿದೆ ಎಂದರು.

ಕರ್ನಾಟಕದಲ್ಲಿ ಪ್ರಥಮ ಬಾರಿಗೆ ರೂಬಿಕ್ಸ್ ಕ್ಯೂಬ್ ನಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರವನ್ನು ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಗಿನ್ನಿಸ್ ರೆಕಾರ್ಡ್ ದಾಖಲೆಯ ಪ್ರಥ್ವಿಶ್ ಕೆ.ಭಟ್ ಇವರು ರಚಿಸಲಿದ್ದಾರೆ

ಪತ್ರಿಕಾಗೋಷ್ಠಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಗೌರವಾಧ್ಯಕ್ಷ ಜನಾರ್ದನ್ ಕೊಡವೂರು, ಗೌರವ ಸಲಹೆಗಾರ ಕೃಷ್ಣ ಶೆಟ್ಟಿಬೆಟ್ಟು, ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್, ಕಾರ್ಯದರ್ಶಿ ವಿಠ್ಠಲ್ ಗೌಡರ್, ಕೋಶಾಧಿಕಾರಿ ಪಂಪೇಶ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

10 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

11 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

13 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

13 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

14 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

14 hours ago