ಉಡುಪಿ: ಮಣಿಪಾಲದ ಐನಾಕ್ಸ್ ಚಿತ್ರಮಂದಿರಕ್ಕೆ ಶುಕ್ರವಾರ ಸಾಯಂಕಾಲ ಪತಿ ಜತೆ ಸಿನಿಮಾ ವೀಕ್ಷಣೆಗೆ ತೆರಳಿದ್ದ ಸಂದರ್ಭ ಇಂಟರ್ವೆಲ್ ಬಳಿಕ ನಾಪತ್ತೆಯಾಗಿದ್ದ ನವವಿವಾಹಿತೆ ಜೆನ್ ಡಿ.ಕ್ರೂಸ್(28) ಗೋವಾದಲ್ಲಿ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ.
ಜೆನ್ ಅವರ ಮೊಬೈಲ್ ಲೊಕೇಶನ್ ಗೋವಾದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಸೋಮವಾರ ಮಣಿಪಾಲ ಪೊಲೀಸರ ತಂಡ ಗೋವಾಕ್ಕೆ ತೆರಳಿ ತನಿಖೆ ನಡೆಸಿತ್ತು. ಜೆನ್ ಅವರನ್ನು ಪ್ರಿಯಕರ, ಪಶ್ಚಿಮ ಬಂಗಾಳ ನಿವಾಸಿ ತನ್ಮಯ್ನಾಥ್(25) ಎಂಬಾತನೊಂದಿಗೆ ಗೋವಾ ಪಣಜಿಯ ಐಲ್ಯಾಂಡ್ ಒಂದರಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಸಿನಿಮಾ ಇಂಟರ್ವೆಲ್ ನಲ್ಲಿ ವಾಷ್ ರೂಂ ಗೆ ಹೋಗಿ ಬರುತ್ತೇನೆ ಎಂದು ಹೇಳಿ ತೆರಳಿದ ಜೆನ್.ಡಿ ಕ್ರೂಸ್ ಬಳಿಕ ನಾಪತ್ತೆಯಾಗಿದ್ದರು. ಅಂದು ಸಾಯಂಕಾಲ ಅವರು ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ತೆರಳಿ ಎಟಿಂ ನಲ್ಲಿ ೩೦ ಸಾವಿರ ರೂ. ಹಣ ತೆಗೆದುಕೊಂಡು ರೈಲಿನಲ್ಲಿ ಗೋವಾಕ್ಕೆ ಪ್ರಯಾಣ ಬೆಳೆಸಿದ್ದರು.
ಜೆನ್ ಪ್ರಿಯಕರ ತನ್ಮಯ್ನಾಥ್ ಧಾರಾವಾಹಿಗಳ ಕ್ಯಾಮರಾಮನ್ ಆಗಿ ಕೆಲಸ ಮಾಡುತಿದ್ದು, ಐದು ವರ್ಷದ ಹಿಂದೆ ಮಂಗಳೂರಿನಲ್ಲಿ ಜೆನ್ಗೆ ಪರಿಚಯವಾಗಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮನೆಯವರಿಗೆ ಹೆದರಿ ಪ್ರೀತಿ ವಿಚಾರ ಮುಚ್ಚಿಟ್ಟಿದ್ದರು ಎನ್ನಲಾಗಿದೆ.
ಜೆನ್ ಮೂಲತಃ ಮೂಡುಬಿದಿರೆ ನಿವಾಸಿಯಾಗಿದ್ದು, ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಕಟಪಾಡಿ ನಿವಾಸಿ ಲಾಯ್ಡ ಮೊಂತೆರೊ ಅವರನ್ನು ಡಿ.31ರಂದು ವಿವಾಹವಾಗಿದ್ದರು. ಇದೀಗ ಪೊಲೀಸರು ಪ್ರೇಮಿಗಳನ್ನು ಮಣಿಪಾಲ ಠಾಣೆಗೆ ಕರೆತರುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…