Featured

ಉಡುಪಿ: ಇಂದಿನಿಂದ ಡಿ. 31 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ : ಜಿಲ್ಲಾಧಿಕಾರಿ ಜಿ ಜಗದೀಶ್‌ -Vishwanews24

ಉಡುಪಿ: ಇಂದಿನಿಂದ ಡಿ. 31 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ : ಜಿಲ್ಲಾಧಿಕಾರಿ ಜಿ ಜಗದೀಶ್‌ -Vishwanews24

ಉಡುಪಿ : ‘‘ಚುನಾವಣಾ ನೀತಿ ಸಂಹಿತೆ ಸೋಮವಾರದಿಂದ ಜಾರಿಗೊಳಿಸಲಾಗಿದ್ದು, ಅದು 2020 ರ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ” ಎಂದು ನವೆಂಬರ್ 30 ರ ಸೋಮವಾರ ಮಣಿಪಾಲದಲ್ಲಿನ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಹೇಳಿದರು.

“ಜಿಲ್ಲೆಯ ಒಟ್ಟು 154 ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಲಿದೆ. ಏಳು ತಾಲೂಕು ಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆ ಉಡುಪಿಯ 16 ಪಂಚಾಯಿತಿಗಳಲ್ಲಿ, ಹೆಬ್ರಿಯ 9 ಪಂಚಾಯಿತಿಗಳು, ಬ್ರಹ್ಮಾವರದ 27 ಪಂಚಾಯಿತಿಗಳು, ಬೈಂದೂರಿನಲ್ಲಿ 15 ಪಂಚಾಯಿತಿಗಳಲ್ಲಿ ನಡೆಯಲಿದೆ. ಎರಡನೇ ಹಂತದ ಚುನಾವಣೆ ಕುಂದಾಪುರದ 44 ಪಂಚಾಯಿತಿಗಳು, ಕಾರ್ಕಳದ 27 ಪಂಚಾಯಿತಿಗಳು ಮತ್ತು ಕಾಪುವಿನ 16 ಪಂಚಾಯಿತಿಗಳಲ್ಲಿ ನಡೆಯಲಿದೆ. ಒಟ್ಟು 87 ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಯಲಿದೆ” ಎಂದು ತಿಳಿಸಿದರು.

ಮೂಲ ಮತದಾನ ಕೇಂದ್ರಗಳು 890, ಸಹಾಯಕ ಬೂತ್‌ಗಳು 282 ಮತ್ತು ಒಟ್ಟು ಮತದಾನ ಕೇಂದ್ರಗಳು 1172 ಇದೆ. ಒಟ್ಟು ಮಹಿಳಾ ಮತದಾರರ ಸಂಖ್ಯೆ 4,12,887, ಪುರುಷ ಮತದಾರರು ಸಂಖ್ಯೆ 3,82,785 ಹಾಗೂ ಇತರರು 9 ಮಂದಿ ಇದ್ದಾರೆ. ಒಟ್ಟು 7,95,681 ಮತದಾರರು ಮತ ಚಲಾಯಿಸಲಿದ್ದಾರೆ.

”ಉಡುಪಿ ಜಿಲ್ಲಾಡಳಿತವು ಎಲ್ಲಾ ಬೂತ್‌ಗಳಲ್ಲಿ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿದೆ” ಎಂದು ಜಿಲ್ಲಾಧಿಕಾರಿ ಹೇಳಿದರು.

”ಮತದಾರರ ಪಟ್ಟಿಯೂ ಸಿದ್ಧವಾಗಿದೆ. ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ನಾವು ಅಧಿಕಾರಿಗಳನ್ನು ನೇಮಿಸುತ್ತೇವೆ” ಎಂದು ತಿಳಿಸಿದರು

Vishwa News 24

Recent Posts

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

5 minutes ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

2 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

2 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

22 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

24 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

24 hours ago