ಉಡುಪಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಸಂಜೆ 5 ಗಂಟೆಗೆ ಕುಂದಾಪುರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ ಮಹಿಳಾ ಮೀನುಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮಾವೇಶದಲ್ಲಿ ಉಸ್ತುವಾರಿ ಸಚಿವೆ ಡಾ| ಜಯಮಾಲಾ, ವಿಧಾನ ಪರಿಷತ್ ಸದಸ್ಯ ಭೋಜೇ ಗೌಡ, ಜೆಡಿಎಸ್ ಮುಖಂಡ ವೈ.ಎಸ್.ವಿ. ದತ್ತ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಅಮರನಾಥ ಶೆಟ್ಟಿ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಗೋಪಾಲ ಭಂಡಾರಿ, ಯು.ಆರ್. ಸಭಾಪತಿ, ಕಾಂಗ್ರೆಸ್ ಮುಖಂಡ ರಾಕೇಶ್ ಮಲ್ಲಿ ಹಾಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಹಿರಿಯ ಪ್ರಮುಖರು ಭಾಗವಹಿಸಲಿದ್ದಾರೆ.
ಈ ಸಂದರ್ಭ ಅವರು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರವಾಗಿ ಮತಯಾಚನೆ ನಡೆಸಲಿದ್ದಾರೆ.
ಸಭೆಯಲ್ಲಿ ಮೈತ್ರಿ ಪಕ್ಷಗಳ ವಿವಿಧ ಕ್ಷೇತ್ರ ಸಮಿತಿ ಅಧ್ಯಕ್ಷರು, ತಾಲೂಕು ಅಧ್ಯಕ್ಷರು, ಬೂತ್ ಕಮಿಟಿ ಅಧ್ಯಕ್ಷರು ಮತ್ತು ಎಲ್ಲ ವಿಭಾಗಗಳ ಪದಾಧಿಕಾರಿಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…