Featured

ಉಡುಪಿ : ಇಂದು ಕುಮಾರ ಸ್ವಾಮಿ ಪ್ರಮೋದ್ ಮಧ್ವರಾಜ್ ಪರ ಮತ ಯಾಚನೆ – Vishwanews24

ಉಡುಪಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬುಧವಾರ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಸಂಜೆ 5 ಗಂಟೆಗೆ ಕುಂದಾಪುರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ ಮಹಿಳಾ ಮೀನುಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಮಾವೇಶದಲ್ಲಿ ಉಸ್ತುವಾರಿ ಸಚಿವೆ ಡಾ| ಜಯಮಾಲಾ, ವಿಧಾನ ಪರಿಷತ್‌ ಸದಸ್ಯ ಭೋಜೇ ಗೌಡ, ಜೆಡಿಎಸ್‌ ಮುಖಂಡ ವೈ.ಎಸ್‌.ವಿ. ದತ್ತ, ಮಾಜಿ ಸಚಿವರಾದ ವಿನಯಕುಮಾರ್‌ ಸೊರಕೆ, ಅಮರನಾಥ ಶೆಟ್ಟಿ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಗೋಪಾಲ ಭಂಡಾರಿ, ಯು.ಆರ್‌. ಸಭಾಪತಿ, ಕಾಂಗ್ರೆಸ್‌ ಮುಖಂಡ ರಾಕೇಶ್‌ ಮಲ್ಲಿ ಹಾಗೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ಹಿರಿಯ ಪ್ರಮುಖರು ಭಾಗವಹಿಸಲಿದ್ದಾರೆ.

ಈ ಸಂದರ್ಭ ಅವರು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರವಾಗಿ ಮತಯಾಚನೆ ನಡೆಸಲಿದ್ದಾರೆ.

ಸಭೆಯಲ್ಲಿ ಮೈತ್ರಿ ಪಕ್ಷಗಳ ವಿವಿಧ‌ ಕ್ಷೇತ್ರ ಸಮಿತಿ ಅಧ್ಯಕ್ಷರು, ತಾಲೂಕು ಅಧ್ಯಕ್ಷರು, ಬೂತ್‌ ಕಮಿಟಿ ಅಧ್ಯಕ್ಷರು ಮತ್ತು ಎಲ್ಲ ವಿಭಾಗಗಳ ಪದಾಧಿಕಾರಿಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಮತ್ತು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago