Featured

ಉಡುಪಿ: ಇಂದು ಭವ್ಯ ಶೋಭಾ ಯಾತ್ರೆಯಲ್ಲಿ ಶೀರೂರು ಶ್ರೀಗಳ ಪುರಪ್ರವೇಶ  – vishwanews24

ಉಡುಪಿ: ಇಂದು ಭವ್ಯ ಶೋಭಾ ಯಾತ್ರೆಯಲ್ಲಿ ಶೀರೂರು ಶ್ರೀಗಳ ಪುರಪ್ರವೇಶ

ಉಡುಪಿ: ಜ.18ರಂದು ನಡೆಯುವ ಶೀರೂರು ಪರ್ಯಾಯ ಹಿನ್ನೆಲೆಯಲ್ಲಿ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ದೇಶಾದ್ಯಂತ ಧಾರ್ಮಿಕ ಕ್ಷೇತ್ರಗಳ ಪರ್ಯಟನದ ಬಳಿಕ ಜ.9ರಂದು ಉಡುಪಿಗೆ ಆಗಮಿಸಲಿದ್ದು, ಅಪರಾಹ್ನ 3:00ಗಂಟೆಗೆ ಕಡಿಯಾಳಿ ಮೂಲಕ ಪುರಪ್ರವೇಶ ಮಾಡಲಿದ್ದಾರೆ.

ಶೀರೂರು ಶ್ರೀಗಳು ಪರ್ಯಟನ ಬಳಿಕ ಶೀರೂರು ಮೂಲಮಠಕ್ಕೆ ಆಗಮಿಸಲಿದ್ದು, ಅಲ್ಲಿಂದ ಪಟ್ಟದ ದೇವರ ಸಮೇತ ಕಡಿಯಾಳಿಗೆ ಆಗಮಿಸಿ, ಅಲ್ಲಿ ಶ್ರೀಮಹಿಷಮರ್ದಿನಿ ದೇವರ ದರ್ಶನದ ಬಳಿಕ ಭವ್ಯ ಶೋಭಾ ಯಾತ್ರೆಯಲ್ಲಿ ಪುರಪ್ರವೇಶ ಮಾಡಲಿದ್ದಾರೆ.ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಶ್ರೀಗಳನ್ನು ಸ್ವಾಗತಿಸಿ, ಶೋಭಾ ಯಾತ್ರೆಯಲ್ಲಿ ಕರೆತರಲಾಗುವುದು. ಪುರಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪುರಪ್ರವೇಶ ಮೆರವಣಿಗೆ ಕಡಿಯಾಳಿಯಿಂದ ಹೊರಟು ಸಿಟಿಬಸ್ ಸ್ಟಾಂಡ್ ಹನುಮಾನ್ ವೃತ್ತ ಕನಕದಾಸ ರಸ್ತೆ ಮೂಲಕ ಕೃಷ್ಣ ಮಠ ತಲುಪಲಿದೆ. 1000ಕ್ಕೂ ಅಧಿಕ ಭಜಕರು, ಉಡುಪಿಯ ಸ್ಥಳೀಯ ಜಾನಪದ ತಂಡಗಳು, ವಿವಿಧ ಕಲಾತಂಡ, ಸಾಂಸ್ಕೃತಿಕ ತಂಡಗಳು ಹಾಗೂ ವಿಶೇಷ ಟ್ಯಾಬ್ಲೊಗಳು ಮೆರವಣಿಗೆಗೆ ಮೆರುಗು ನೀಡಲಿವೆ ಶೀರೂರು ಶ್ರೀಗಳು ರಥಬೀದಿಯಲ್ಲಿ ಕನಕನ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಪಡೆದ ಬಳಿಕ ವಿವಿಧ ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ ರಥಬೀದಿಯಲ್ಲಿ ಹಾಕಲಾಗುವ ವೇದಿಕೆಯಲ್ಲಿ ಉಡುಪಿ ನಗರಸಭೆಯ ವತಿಯಿಂದ ಪೌರ ಸಮ್ಮಾನವನ್ನು ಸ್ವೀಕರಿಸುವರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago