ಉಡುಪಿ: ಇಂದು 219 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

Featured, ಉಡುಪಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 219 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6503 ಕ್ಕೆ ಏರಿಕೆಯಾಗಿದೆ.

ಮಂಗಳವಾರ 1203 ವರದಿಗಳು ನೆಗೆಟಿವ್ ಬಂದಿದ್ದು, 219 ಪಾಸಿಟಿವ್ ಬಂದಿವೆ. 1610 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಇದುವರೆಗೂ 3768 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2676 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 66 ಮಂದಿ ಸಾವನಪ್ಪಿದ್ದಾರೆ