ಉಡುಪಿ: ಇಂದು 245 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 245 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5605 ಕ್ಕೆ ಏರಿಕೆಯಾಗಿದೆ.
ಶುಕ್ರವಾರ 1148 ವರದಿಗಳು ನೆಗೆಟಿವ್ ಬಂದಿದ್ದು, 245 ಪಾಸಿಟಿವ್ ಬಂದಿವೆ. 1203 ವರದಿಗಳು ಬರುವುದು ಬಾಕಿ ಇದೆ.
ಜಿಲ್ಲೆಯಲ್ಲಿ ಇದುವರೆಗೂ 3258 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2292 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಶುಕ್ರವಾರ 5 ಮಂದಿ ಕೋವಿಡ್ ಸೋಂಕಿನಿಂದ ಮೃತರಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸಾವನಪ್ಪಿದವರ ಸಂಖ್ಯೆ 55 ಕ್ಕೆ ಏರಿಕೆಯಾಗಿದೆ
