Judge and gavel in courtroom
ಉಡುಪಿ: ನಗರ ಪೋಲಿಸ್ ಠಾಣೆಯ ವ್ಯಾಪ್ತಿಯ ಇಂದ್ರಾಳಿ ರೈಲ್ವೆ ಸ್ಟೇಷನ್ ನಾಗಬನ ಬಳಿಯ ಸೇತುವೆ ಹತ್ತಿರ 2022ರ ಜುಲೈ 21ರಂದು ನಡೆದ ವ್ಯಕ್ತಿಯ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪ್ರಕರಣ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಕುಮಾರ್ ಎನ್ನುವರ ಮೇಲೆ ವಿಘ್ನೇಶ್ ಕುಟ್ಟಿ ಮತ್ತು ನವೀನ್ ಕುಮಾರ್ ಎನ್ನುವರು ಆತ ತನ್ನ ತಾಯಿಯ ಬಗ್ಗೆ ಅವ್ಯಾಚ್ಯ ಶಬ್ದಗಳಿಂದ ಬೈದುದರಿಂದ ಕೋಪಗೊಂಡ ಆರೋಪಿಗಳು ದೊಣ್ಣೆಯಿಂದ ಕುಮಾರ್‌ನ ತಲೆಗೆ ಹೊಡೆದು ತೀವ್ರ ಗಾಯ ಉಂಟು ಮಾಡಿದ್ದರ ಪರಿಣಾಮ ಆತ ಸ್ಥಳದಲ್ಲಿ ಮೃತಪಟ್ಟಿದ್ದನು.
ಪೊಲೀಸರು ಈ ಕೊಲೆ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಅಂತಿಮ ವರದಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಪೊಲೀಸರು ಅಂತಿಮ ವರದಿಯಲ್ಲಿ ನಮೂದಿಸಿದ ಎಲ್ಲ ಸಾಕ್ಷಿಗಳನ್ನು ವಿಚಾರಣೆ ಮಾಡಿ ಆರೋಪಿಗಳ ವಿರುದ್ಧ ಪ್ರಕರಣ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಅವರು ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿರುತ್ತಾರೆ.
ಈ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ನ್ಯಾಯವಾದಿ ಚೇರ್ಕಾಡಿ ಅಖೀಲ್ ಬಿ.ಹೆಗ್ಡೆ ವಾದಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…