Featured

ಉಡುಪಿ: ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆ ಖಂಡಿಸಿ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟಿಸಿದ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು – Vishwanews24

ಉಡುಪಿ: ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆ ಖಂಡಿಸಿ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟಿಸಿದ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು

ಉಡುಪಿ: ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆ ಯನ್ನು ಖಂಡಿಸಿ ಇಂದು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಅವರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಇಂದ್ರಾಳಿ ಬ್ರಿಡ್ಜ್ ನ ಹೊಂಡ ಗುಂಡಿ ರಸ್ತೆಗೆ ಆರತಿ ಎತ್ತಿ, ತೆಂಗಿನಕಾಯಿ ಒಡೆದು ರಸ್ತೆ ಮೇಲೆ ಉರುಳು ಸೇವೆ ಮಾಡುವ ಮೂಲಕ ನಿತ್ಯಾನಂದ ಒಳಕಾಡು ರವರು ವಿಶಿಷ್ಟವಾಗಿ ಪ್ರತಿಭಟಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ನಿತ್ಯಾನಂದ ಒಳಕಾಡು ಅವರು “ಈ ರಸ್ತೆ ಗೆ ಟೆಂಡರ್ ಆಗಿ ಮೂರು ವರ್ಷಗಳಿಂದ ರಸ್ತೆ ಹಾಳಾದರೂ ಯಾರೂ ಪ್ರಶ್ಬೆ ಮಾಡುತ್ತಿಲ್ಲ. ಪ್ರತಿನಿತ್ಯ ಸಾವಿರಾರು ಜನರು ಈ ರಸ್ತೆಯಲ್ಲಿ ಸಂಚಾರ ನಡೆಸುತ್ತಾರೆ. ಸ್ವತಹ ಮುಖ್ಯಮಂತ್ರಿಗಳೇ ಈ ರಸ್ತೆಯಲ್ಲಿ ಸಂಚಾರ ಮಾಡಿದರೂ ಕೂಡಾ ಅವರ ಕಣ್ಣಿಗೂ ಈ ರಸ್ತೆಯ ಸಮಸ್ಯೆ ಕಂಡು ಬಂದಿಲ್ಲ.

ಮಾತಿನಲ್ಲಿ ಹಿಡಿತವಿರಲಿ,ಪರರನ್ನು ಅಗೌರವಿಸಬೇಡಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇಲ್ಲಿನ ಹೊಂಡ ಗಳನ್ನು ರಿಪೇರಿ ಮಾಡಲು ಸ್ವತಹ ಮೋದಿ ಮತ್ತು ನಿತಿನ್ ಗಡ್ಕರಿ ಬರಬೇಕಾದ ಅನಿವಾರ್ಯತೆ ಇದೆ. ಉಡುಪಿ ಜನರು ಮುಗ್ದರು, ಯಾರೂ ಪ್ರಶ್ನೆ ಮಾಡುವುದಿಲ್ಲ. ಮಾನ್ಯ ಪ್ರಧಾನ ಮಂತ್ರಿಗಳು ಉಡುಪಿಗೆ ಬಂದು ಜನರ ಸಮಸ್ಯೆ ಬಗೆಹರಿಸಲಿ. ಈ ರಸ್ತೆಯಲ್ಲಿ ಬೀದಿ ದೀಪ ಕೂಡಾ ಇಲ್ಲ. ಇದರಿಂದಾಗಿ ದನ ಕರುಗಳು ಸಾಯುತ್ತವೆ. ದನ ಕರುಗಳ ಹೆಸರಿನಲ್ಲಿ ವೋಟ್ ತೆಗೆದುಕೊಳ್ಳುವ ಇವರಿಗೆ ಇದು ಕಾಣುವುದಿಲ್ಲವಾ. ಮೊನ್ನೆ ಮುಖ್ಯಮಂತ್ರಿಯವರು ಬರುವ ಸಂಧರ್ಭದಲ್ಲಿ ಹಾಕಿದ ಡಾಮಾರ್ ಒಂದೇ ದಿನದಲ್ಲಿ ಕಿತ್ತು ಬಂದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದ್ರಾಳಿಯ ಈ ಭಾಗದಲ್ಕಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತಿದ್ದು ದ್ವಿಚಕ್ರ ಮತ್ತು ಇತರ ವಾಹನಗಳು ನಿರಂತರವಾಗಿ ಅಪಘಾತಕ್ಕೀಡಾಗಿ ಜನರು ಸಂಕಷ್ಟ ಅನುಭವಿಸುತಿದ್ದಾರೆ.

ಬಂಟ್ವಾಳ: ತನ್ನ ಜಮೀನಿನಲ್ಲಿ ಬೆಳೆದ ಅಡಕೆ ಆದಾಯದಿಂದ ಬಸ್‌ ಖರೀದಿಸಿದ ಸರ್ಕಾರಿ ಶಾಲೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

7 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago