Featured

ಉಡುಪಿ: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ :  ಜಿಲ್ಲಾಧಿಕಾರಿ  – vishwanews24

ಉಡುಪಿ: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ :  ಜಿಲ್ಲಾಧಿಕಾರಿ

 ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟಿçà ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ ಕುಂಠಿತಗೊಳ್ಳುತ್ತಿದೆ. ಕಾಮಗಾರಿಯನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

 ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ರಾಷ್ಟಿçà ಹೆದ್ದಾರಿ ರಸ್ತೆ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

 ಇಂದ್ರಾಳಿ ರೈಲ್ವೇ ಮೇಲ್ಸುತುವೆ ಸೇತುವೆ ಕಾಮಗಾರಿಯು 2018 ರಿಂದಲೇ ಪ್ರಾರಂಭವಾದರೂ ಈವರೆಗೂ ಸಹ ಪೂರ್ಣಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಡಾಗುವುದರ ಜೊತೆಗೆ ಅನೇಕ ಅಪಘಾತಗಳು, ಸಾವು ನೋವುಗಳು ಆಗಿವೆ. ಸಾರ್ವಜನಿಕರು ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇವೆಲ್ಲವುಗಳಿಗೂ ಜಿಲ್ಲಾಡಳಿತ ಉತ್ತರ ನೀಡಬೇಕು. ಆದರೆ, ಕಾಮಗಾರಿಯ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಸಾಗದೇ ಪೂರ್ಣಗೊಂಡಿರುವುದಿಲ್ಲ. ಕಳೆದ ಆರು ತಿಂಗಳಿನಿA ನಾವುಗಳು ನಿರಂತರವಾಗಿ ಸಭೆ ಹಾಗೂ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ನಡೆಸುತ್ತಿದ್ದೇವೆ. ಆದರೂ ಸಹ ಕಾಮಗಾರಿಯ ವೇಗವಾಗಿ ಆಗುತ್ತಿಲ್ಲ. ಅಭಿಯಂತರರು ಹಾಗೂ ಗುತ್ತಿಗೆದಾರರು ಎಲ್ಲವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕಾಮಗಾರಿಯ ಪ್ರಗತಿಯ ವೇಗವನ್ನು ಹೆಚ್ಚಿಸಿ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಕಾನೂನು ರೀತಿಯಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದರು.

ಈಗಾಗಲೇ ಕಬ್ಬಿಣದ ಗರ್ಡಲ್ಸ್ನ ಫ್ಯಾಬ್ರಿಕೇಷನ್ ವರ್ಕ್ಸ್ ಪೂರ್ಣಗೊಂಡಿದೆ. ಇವುಗಳ ಇನ್ಸ್ಫೆಕ್ಷನ್ ಕಾರ್ಯಗಳನ್ನು ರೈಲ್ವೆ ಇಲಾಖೆ ಹಾಗೂ ರಾಷ್ಟಿçà ಹೆದ್ದಾರಿ ಅಧಿಕಾರಿಗಳು ಜಂಟಿಯಾಗಿ ಕೈಗೊಂಡು ಗುಣಮಟ್ಟವನ್ನು ಪರೀಕ್ಷಿಸಬೇಕು ಎಂದ ಅವರು, ಕಬ್ಬಿಣದ ಗರ್ಡಲ್ಸ್ ಅನ್ನು ಸೇತುವೆಯಾಗಿ ಅಳವಡಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ತಯಾರಿಗಳನ್ನು ಈಗಿನಿಂದಲೇ ಜೊತೆ ಜೊತೆಯಾಗಿ ಕೈಗೊಳ್ಳಬೇಕೆಂದು ಅಭಿಯಂತರುಗಳಿಗೆ ಸೂಚನೆ ನೀಡಿದರು

ರಾಷ್ಟಿçà ಹೆದ್ದಾರಿ 169 ಕರಾವಳಿ ಬೈಪಾಸ್ನಿಂದ ಮಲ್ಪೆವರೆಗಿನ ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣ ಪ್ರಮಾಣದಲ್ಲಿ ತ್ವರಿತವಾಗಿ ಕೈಗೊಳ್ಳಬೇಕು. ವಿದ್ಯುತ್ ಕಂಬಗಳನ್ನು ಬದಲಾವಣೆ ಕಾರ್ಯವನ್ನು ಆದಷ್ಟು ತ್ವರಿತವಾಗಿ ಕೈಗೊಳ್ಳಬೇಕು. ಆಸ್ತಿಯ ಮಾಲೀಕರು ಇದಕ್ಕೆ ಸಹಕರಿಸಬೇಕು. ಭೂ ಸ್ವಾಧೀನ ಹಣವನ್ನು ಮುಂಚಿತವಾಗಿಯೇ ಠೇವಣಿ ಇಡಬೇಕು ಎಂದ ಅವರು, ಕಾಮಗಾರಿ ಕೈಗೊಳ್ಳುವಲ್ಲಿ ಯಾವುದೇ ರೀತಿಯ ಅಡಚಣೆಗಳು ಉಂಟಾದಲ್ಲಿ ಪೊಲೀಸ್ ಇಲಾಖೆಯ ನೆರವು ಪಡೆಯಬೇಕೆಂದರು.

  ರಾಷ್ಟಿçà ಹೆದ್ದಾರಿ 66 ಸಂತೆಕಟ್ಟೆAಬಲಪಾಡಿಯ ಅಂಡರ್ಪಾಸ್ ರಸ್ತೆಯ ಕಾಮಗಾರಿಯನ್ನು ಇನ್ನೂ ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಳೆಗಾಲ ಪ್ರಾರಂಭವಾಗಿ ಕಾಮಗಾರಿಗೆ ಅಡಚಣೆಗಳು ಆಗುವ ಸಾಧ್ಯತೆ ಇರುತ್ತದೆ ಎಂದರು.   

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಸಹಾಯಕ ಕಮೀಷನರ್ ಮಹೇಶ್ಚಂದ್ರ, ರಾಷ್ಟಿçà ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಶೃಂಗೇರಿಚಿಕ್ಕಮಗಳೂರು ರಾಷ್ಟಿçà ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago