ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟಿçÃಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ ಕುಂಠಿತಗೊಳ್ಳುತ್ತಿದೆ. ಕಾಮಗಾರಿಯನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ರಾಷ್ಟಿçÃಯ ಹೆದ್ದಾರಿ ರಸ್ತೆ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಇಂದ್ರಾಳಿ ರೈಲ್ವೇ ಮೇಲ್ಸುತುವೆ ಸೇತುವೆ ಕಾಮಗಾರಿಯು 2018 ರಿಂದಲೇ ಪ್ರಾರಂಭವಾದರೂ ಈವರೆಗೂ ಸಹ ಪೂರ್ಣಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಡಾಗುವುದರ ಜೊತೆಗೆ ಅನೇಕ ಅಪಘಾತಗಳು, ಸಾವು ನೋವುಗಳು ಆಗಿವೆ. ಸಾರ್ವಜನಿಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇವೆಲ್ಲವುಗಳಿಗೂ ಜಿಲ್ಲಾಡಳಿತ ಉತ್ತರ ನೀಡಬೇಕು. ಆದರೆ, ಕಾಮಗಾರಿಯ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಸಾಗದೇ ಪೂರ್ಣಗೊಂಡಿರುವುದಿಲ್ಲ. ಕಳೆದ ಆರು ತಿಂಗಳಿನಿAದ ನಾವುಗಳು ನಿರಂತರವಾಗಿ ಸಭೆ ಹಾಗೂ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ನಡೆಸುತ್ತಿದ್ದೇವೆ. ಆದರೂ ಸಹ ಕಾಮಗಾರಿಯ ವೇಗವಾಗಿ ಆಗುತ್ತಿಲ್ಲ. ಅಭಿಯಂತರರು ಹಾಗೂ ಗುತ್ತಿಗೆದಾರರು ಈ ಎಲ್ಲವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕಾಮಗಾರಿಯ ಪ್ರಗತಿಯ ವೇಗವನ್ನು ಹೆಚ್ಚಿಸಿ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಕಾನೂನು ರೀತಿಯಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದರು.
ಈಗಾಗಲೇ ಕಬ್ಬಿಣದ ಗರ್ಡಲ್ಸ್ನ ಫ್ಯಾಬ್ರಿಕೇಷನ್ ವರ್ಕ್ಸ್ ಪೂರ್ಣಗೊಂಡಿದೆ. ಇವುಗಳ ಇನ್ಸ್ಫೆಕ್ಷನ್ ಕಾರ್ಯಗಳನ್ನು ರೈಲ್ವೆ ಇಲಾಖೆ ಹಾಗೂ ರಾಷ್ಟಿçÃಯ ಹೆದ್ದಾರಿ ಅಧಿಕಾರಿಗಳು ಜಂಟಿಯಾಗಿ ಕೈಗೊಂಡು ಗುಣಮಟ್ಟವನ್ನು ಪರೀಕ್ಷಿಸಬೇಕು ಎಂದ ಅವರು, ಕಬ್ಬಿಣದ ಗರ್ಡಲ್ಸ್ ಅನ್ನು ಸೇತುವೆಯಾಗಿ ಅಳವಡಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ತಯಾರಿಗಳನ್ನು ಈಗಿನಿಂದಲೇ ಜೊತೆ ಜೊತೆಯಾಗಿ ಕೈಗೊಳ್ಳಬೇಕೆಂದು ಅಭಿಯಂತರುಗಳಿಗೆ ಸೂಚನೆ ನೀಡಿದರು.
ರಾಷ್ಟಿçÃಯ ಹೆದ್ದಾರಿ 169 ಎ ಯ ಕರಾವಳಿ ಬೈಪಾಸ್ನಿಂದ ಮಲ್ಪೆವರೆಗಿನ ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣ ಪ್ರಮಾಣದಲ್ಲಿ ತ್ವರಿತವಾಗಿ ಕೈಗೊಳ್ಳಬೇಕು. ವಿದ್ಯುತ್ ಕಂಬಗಳನ್ನು ಬದಲಾವಣೆ ಕಾರ್ಯವನ್ನು ಆದಷ್ಟು ತ್ವರಿತವಾಗಿ ಕೈಗೊಳ್ಳಬೇಕು. ಆಸ್ತಿಯ ಮಾಲೀಕರು ಇದಕ್ಕೆ ಸಹಕರಿಸಬೇಕು. ಭೂ ಸ್ವಾಧೀನ ಹಣವನ್ನು ಮುಂಚಿತವಾಗಿಯೇ ಠೇವಣಿ ಇಡಬೇಕು ಎಂದ ಅವರು, ಕಾಮಗಾರಿ ಕೈಗೊಳ್ಳುವಲ್ಲಿ ಯಾವುದೇ ರೀತಿಯ ಅಡಚಣೆಗಳು ಉಂಟಾದಲ್ಲಿ ಪೊಲೀಸ್ ಇಲಾಖೆಯ ನೆರವು ಪಡೆಯಬೇಕೆಂದರು.
ರಾಷ್ಟಿçÃಯ ಹೆದ್ದಾರಿ 66 ಸಂತೆಕಟ್ಟೆ–ಅAಬಲಪಾಡಿಯ ಅಂಡರ್ಪಾಸ್ ರಸ್ತೆಯ ಕಾಮಗಾರಿಯನ್ನು ಇನ್ನೂ ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಳೆಗಾಲ ಪ್ರಾರಂಭವಾಗಿ ಕಾಮಗಾರಿಗೆ ಅಡಚಣೆಗಳು ಆಗುವ ಸಾಧ್ಯತೆ ಇರುತ್ತದೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಸಹಾಯಕ ಕಮೀಷನರ್ ಮಹೇಶ್ಚಂದ್ರ, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಶೃಂಗೇರಿ–ಚಿಕ್ಕಮಗಳೂರು ರಾಷ್ಟಿçÃಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…