ಉಡುಪಿ: ಇಂದ್ರಾಳಿ ರೈಲು ನಿಲ್ದಾಣದ ಮೇಲ್ವೇತುವೆಗೆ ತುರ್ತಾಗಿ ಮೇಲ್ಛಾವಣಿ ನಿರ್ಮಾಣ ಮಾಡುವಂತೆ ಆಗ್ರಹ – vishwanews24
ಉಡುಪಿ: ಇಂದ್ರಾಳಿ ರೈಲು ನಿಲ್ದಾಣದ ಮೇಲ್ವೇತುವೆಗೆ ತುರ್ತಾಗಿ ಮೇಲ್ಛಾವಣಿ ನಿರ್ಮಾಣ ಮಾಡುವಂತೆ ಆಗ್ರಹ
ಉಡುಪಿ: ಇಲ್ಲಿನ ಇಂದ್ರಾಳಿ ರೈಲು ನಿಲ್ದಾಣದಲ್ಲಿರುವ ಮೇಲ್ವೇತುವೆಗೆ ತುರ್ತಾಗಿ ಮೇಲ್ಛಾವಣಿ ನಿರ್ಮಾಣ ಮಾಡುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ಕೆ. ಬಾಲಗಂಗಾಧರ ರಾವ್, ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.
ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಬಿಸಿಲು ಮತ್ತು ಮಳೆಯಿಂದ ರಕ್ಷಿಸಿಕೊಳ್ಳಲು ಅಸಹಾಯಕ ಪರಿಸ್ಥಿತಿ ಎದುರಾಗಿದೆ. ಆದಷ್ಟು ಶೀಘ್ರವಾಗಿ ಜಿಲ್ಲಾಡಳಿತ, ಶಾಸಕರು, ಸಂಸದರು, ರೈಲ್ವೆ ಅಧಿಕಾರಿಗಳು ಈ ಸಮಸ್ಯೆಯನ್ನು ಗಮನಿಸಿ ಮೇಲ್ಬಾವಣೆ ವ್ಯವಸ್ಥೆ ಕಲ್ಪಿಸಿಕೊಡಬೇಕು. ದಿನ ನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸುವ ಈ ರೈಲ್ವೆ ನಿಲ್ದಾಣದಲ್ಲಿ ಮಳೆಗಾಲದಲ್ಲಿ ಸುಸಜ್ಜಿತ ವ್ಯವಸ್ಥೆ ಇಲ್ಲ.
5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ಸೇರಲು ಅವಕಾಶ : ಮಧು ಬಂಗಾರಪ್ಪ – vishwanews24
ಒಮ್ಮೊಮ್ಮೆ ರೈಲು ನಿಲ್ದಾಣದಲ್ಲಿ ರೈಲಿನ ನಿಲುಗಡೆ ವೆತ್ಯಾಸ ಕಂಡು ಬಂದಾಗ, ನಿಲ್ದಾಣ ನಿಯಂತ್ರಕರ ಸೂಚನೆ ಮೆರೆಗೆ ಪ್ಲಾಟ್ ಫಾರ್ಮ್ ಬದಲಿಸ ಬೇಕಾದ ಅನಿವಾರ್ಯ ಪರಿಸ್ಥಿತಿಯನ್ನು ಪ್ರಯಾಣಿಕರು ಎದುರಿಸಬೇಕಾಗುತ್ತದೆ. ಈ ವೇಳೆ ಚಿಕ್ಕ ಮಕ್ಕಳನ್ನು ಹೊತ್ತು ಸಾಗುವ ಮಾತೆಯರ ಮತ್ತು ಕುಂಟುತ್ತ ನಡೆದು ಸಾಗುವ ಹಿರಿಯ ನಾಗರಿಕರ ಪರಿಸ್ಥಿತಿ ಅಯೋಮಯ ಅನಿಸುತ್ತಿದೆ. ಈ ಹಿನ್ನೆಲೆ ಪ್ರಯಾಣಿಕರ ಹಿತದೃಷ್ಟಿಯಿಂದ ಶೀಘ್ರವಾಗಿ ಮಾಡಿನ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ.
