ಉಡುಪಿ

ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ಜ.15ರೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ : ಸಂಸದ ಕೋಟ ಭರವಸೆ – vishwanews24

ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ಜ.15ರೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ- ಸಂಸದ ಕೋಟ ಭರವಸೆ

ಉಡುಪಿ: ಉಡುಪಿ ಮಣಿಪಾಲ ಸಂಪರ್ಕಿಸುವ ಇಂದ್ರಾಳಿ ರೈಲ್ವೇ ಸೇತುವೆ 2025ರ ಜನವರಿ 15ರೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.

ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಅವ್ಯವಸ್ಥೆಯಿಂದ ಈಗಾಗಲೇ ಹಲವು ಬಾರಿ ಅಪಘಾತಗಳು ನಡೆದಿದೆ. ಕಾಮಗಾರಿ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ, ರೈಲ್ವೇ ಸೇತುವೆ ಕಾಮಗಾರಿಯ ಪರಿಶೀಲನೆ ನಡೆಸಿದರು.

ಭೇಟಿ ವೇಳೆ ಮಾತನಾಡಿದ ಅವರು, ಈ ಸೇತುವೆ ಬಗ್ಗೆ ತುಂಬಾ ವಿವಾದಗಳು ನಡೆಯುತ್ತಿವೆ ಅಪಘಾತಗಳು ಆಗಿವೆ. 2018 ರಲ್ಲಿ ಈ ಕಾಮಗಾರಿ ಆರಂಭವಾಗಿದ್ದು, ರೈಲ್ವೆ ಇಲಾಖೆ ವಿಳಂಬ ದಿಂದ ತಡವಾಗುತ್ತಿದೆ. 138 ಟನ್ ತೂಕದ ಗರ್ಡರ್ ಅಳವಡಿಸುವ ಯೋಜನೆ ಇದಾಗಿತ್ತು. ರಸ್ತೆ ಉದ್ದ 38 ಮೀಟರ್ ನಿಂದ 58 ಮೀಟರ್ ಗೆ ವಿಸ್ತರಣೆಯಾಗಿದೆ. ಗರ್ಡರ್ ಗಳಿಗೆ ಅಳವಡಿಸುವ ಸ್ಟೀಲ್ 420 ಟನ್ ಗೆ ಏರಿಕೆಯಾಗಿದೆ. ಕಾಮಗಾರಿ ವಿಳಂಬವಾಗಿರುವುದು ಹೌದು. ಜನವರಿ 15ರೊಳಗೆ ವಾಹನ ಸಂಚಾರಕ್ಕೆ ಅನುಕೂಲ ಮಾಡಲಾಗುವುದು ಎಂದು ತಿಳಿಸಿದರು.

ಮುಂದುವರೆದು ಜಿಲ್ಲಾಧಿಕಾರಿಗಳು ಮತ್ತು ಎಸ್ ಪಿ ನಡೆಸಿರುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನವಾಗಿದೆ. ಕಾಮಗಾರಿಗೆ ಬೇಕಾದ ಎಲ್ಲಾ ಮೆಟೀರಿಯಲ್ಸ್ ಈಗ ಬಂದಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರನ ಮೇಲೆ ಎಫ್‌ಐಆರ್ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಪಘಾತಗಳು ಆಗುತ್ತಿವೆ, ಹಾಗಾಗಿ ಎಫ್‌ಐಆರ್ ಕೂಡ ಆಗಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಜನವರಿ 15ರೊಳಗೆ ಕಾಮಗಾರಿ ಮುಗಿಸುವುದಾಗಿ ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ. ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ನಾನು ಸಂಸದನಾಬಳಿಕ ನಾಲ್ಕೈದು ಬಾರಿ ಸಭೆ ಕರೆದಿದ್ದೇನೆ. ಈ ಸ್ಥಳಕ್ಕೆ ಮೂರು ನಾಲ್ಕು ಬಾರಿ ಭೇಟಿ ಕೊಟ್ಟಿದ್ದೇನೆ ಎಂದರು.

ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ‘ನವೆಂಬರ್ 20 ರೊಳಗೆ ಗರ್ಡರ್‌ಗಳ ವೆಲ್ಡಿಂಗ್ ಪೂರ್ಣಗೊಳಿಸಲಾಗುವುದು. ನಂತರ ಅವುಗಳನ್ನು ಸ್ಥಳಾಂತರಿಸಲಾಗುತ್ತದೆ ಮತ್ತು ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ರೈಲ್ವೆ ಮತ್ತು ಹೆದ್ದಾರಿ ಇಲಾಖೆಗಳೆರಡೂ ತೊಡಗಿಸಿಕೊಂಡಿರುವುದರಿಂದ ವಿವಿಧ ಪ್ರಕ್ರಿಯೆಗಳ ಅಗತ್ಯವಿದೆ. ಯೋಜನೆ ಪೂರ್ಣಗೊಳ್ಳುವವರೆಗೆ ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸಬೇಕೆಂದು ನಾನು ಕೋರುತ್ತೇನೆ ಎಂದು ಹೇಳಿದರು.

ಎನ್‌ಎಚ್‌ಎಐ ಎಂಜಿನಿಯರ್ ಮಂಜುನಾಥ್ ನಾಯಕ್, ಸಿಎಂಸಿ ಸದಸ್ಯ ಗಿರೀಶ್ ಅಂಚನ್ ಮತ್ತು ಇತರ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದರು

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago