ಉಡುಪಿ: ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಇಡೀ ಕರ್ನಾಟಕದಲ್ಲಿ ಬಿಜೆಪಿ ಪರವಾದ ಅಲೆ ನಿರ್ಮಾಣವಾಗಿದೆ. ಪ.ಜಾತಿ (SC), ಪ.ಪಂ (ST) ಮತ್ತು ಹಿಂದುಳಿದ ವರ್ಗದವರು ಒಟ್ಟಾಗಿ ಬಿಜೆಪಿಯನ್ನು ಸ್ಪಷ್ಟವಾಗಿ ಗೆಲ್ಲಿಸುತ್ತಾರೆ. ಈ ಬಾರಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಏರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಎಲ್ಲಾ ಯೋಜನೆ ಮತ್ತು ಯೋಚನೆಗಳನ್ನು ಮಾಡಿ ವಿಜಯ ಸಂಕಲ್ಪ ಯಾತ್ರೆ, ಬೂತ್ ಮಟ್ಟದ ಕಾರ್ಯಕ್ರಮ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶಕ್ತಿ ಕೇಂದ್ರದ ಮಟ್ಟದಲ್ಲಿ ಕಾರ್ಯಕರ್ತರ ಜೋಡಣೆ ಕಾರ್ಯಕ್ರಮಗಳನ್ನು ಮುಗಿಸಿರುವುದರಿಂದ ನಿಶ್ಚಯವಾಗಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.
ಸಾಮಾನ್ಯವಾಗಿ ಮತದಾನದ ಪೂರ್ವ ಸಮೀಕ್ಷೆಗಳೇ ಅಂತಿಮವಲ್ಲ. ಮುಂಬರುವ ದಿನಗಳಲ್ಲಿ ಸಮೀಕ್ಷೆಯನ್ನು ಮೀರಿ ಸ್ಪಷ್ಟ ಬಹುಮತ ಪಡೆಯುತ್ತೇವೆ. ಪ.ಜಾತಿ, ಪ.ಪಂಗಡದವರಿಗೆ ಮೀಸಲಾತಿಯನ್ನು ಹೆಚ್ಚು ಮಾಡಿದ್ದೇವೆ. ದೇವರಾಜ್ ಅರಸರ ನಂತರ ಯಾವುದಾದರೂ ಒಂದು ಸರಕಾರ ಮೀಸಲಾತಿಯ ಜೇನುಗೂಡಿಗೆ ಕೈ ಇಟ್ಟು ಎಲ್ಲಾ ಸಮಾಜದವರಿಗೂ ಸಿಹಿಯನ್ನು ಹಂಚಿದ್ದರೇ ಅದು ಬೊಮ್ಮಾಯಿಯವರ ನೇತೃತ್ವದ ಸರ್ಕಾರ ಎಂಬ ಭಾವನೆ ಜನರಿಗೆ ಬಂದಿದೆ ಎಂದರು.
17% ಮೀಸಲಾತಿಯಲ್ಲಿ ಅಲೆಮಾರಿ, ಸ್ಪರ್ಶ ಪ.ಜಾತಿಯವರಿಗೆ ಮೀಸಲಾತಿಯನ್ನು ಹಂಚಲಾಗಿದೆ. ಅದೇ ರೀತಿ ಪ.ಜಾತಿಯವರಿಗೆ ಶೇ.15ರಿಂದ ಶೇ.17ಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೇ ಪ.ಪಂಗಡದವರಿಗೆ ಶೇ.3ರಿಂದ ಶೇ.7ಕ್ಕೆ ಏರಿಕೆ ಮಾಡಿರುವುದು ಮತ್ತು ಗುರುತಿಸದೇ ಇರುವ ಅನೇಕ ಸಣ್ಣ ಸಮುದಾಯವನ್ನು ಹೆಕ್ಕಿ ನ್ಯಾಯ ಕೊಟ್ಟಿರುವುದನ್ನು ಜನರು ಗಮನದಲ್ಲಿಟ್ಟುಕೊಂಡಿದ್ದಾರೆ. ಒಕ್ಕಲಿಗ, ಕುಂಬಾರ, ವೀರಶೈವ ಸೇರಿದಂತೆ ನಿಗಮಗಳಿಗೆ ಬೇಡಿಕೆ ಇಟ್ಟಿದ್ದ 19ರಿಂದ 20 ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ನಿಗಮವನ್ನು ಯಡಿಯೂರಪ್ಪಮತ್ತು ಬೊಮ್ಮಾಯಿ ಸರ್ಕಾರ ನೀಡಿದೆ ಎಂದು ಶ್ಲಾಘಿಸಿದರು.
ಧರ್ಮದ ಆಧಾರದಲ್ಲಿ ಮೀಸಲಾತಿ ಸ್ಪಷ್ಟತೆ ಇರಲಿಲ್ಲ. ಅನ್ಯಾಯವಾಗಬಾರದೆಂದು ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರ ಸರ್ಕಾರ ಮೀಸಲಿಟ್ಟ ಶೇ.10 ಮೀಸಲಾತಿಯಲ್ಲಿ ಈ ನಾಲ್ಕನ್ನು ಸೇರಿಸಲಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಅವರಿಗೂ ಅನುಕೂಲವಾಗುತ್ತದೆ. ವಿರೋಧಿಸುವವರು ಇದನ್ನು ಅರ್ಥಮಾಡಿಕೊಳ್ಳಬೇಕು. ಅವರಿಗೆ ನ್ಯಾಯ ಹೆಚ್ಚು ದೊರಕುತ್ತದೆ ಎಂದು ಹೇಳಿದರು.
ಅನಾಥ ಮಕ್ಕಳಿಗೆ ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕೆಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರು ವರದಿ ಸಲ್ಲಿಸಿದ್ದಾರೆ. ಅದು ಸಚಿವ ಸಂಪುಟ ತೀರ್ಮಾನದಲ್ಲಿ ಅಂಗೀಕಾರಕ್ಕೆ ಬಂದಿದೆ. ಅದನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದರು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…