Featured

ಉಡುಪಿ : ಇನ್ನಾದರೂ ಕರಾವಳಿ ಜನ ಬಿಜೆಪಿಯನ್ನು ದೂರ ಇಡಬೇಕಿದೆ : ರಮೇಶ್ ಕಾಂಚನ್ – Vishwanews24

ಕರಾವಳಿ ಭಾಗದ ಪುಣ್ಯ ಪುರುಷರಿಗೆ ಪಠ್ಯ ಪುಸ್ತಕಗಳಲ್ಲಿ ಅವಮಾನ ಮಾಡಿರುವುದು ಖಂಡನೀಯ..

ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳಿಗೆ ಅವಮಾನ, ಕರಾವಳಿ ಹಿಂದುಳಿದ ವರ್ಗಗಳಿಗೆ ಮಾಡಿದ ಘೋರ ಅಪಮಾನ

ಹಿಂದುತ್ವ ಅಜೆಂಡ ಬಳಸಿ ಅಧಿಕಾರಕ್ಕೆ ಬಂದ ಬಿಜೆಪಿಯಿಂದ ಹಿಡನ್ ಅಜೆಂಡ ನಿಧಾನಕ್ಕೆ ಅನುಷ್ಠಾನ..

ಉಡುಪಿ: ಸರ್ಕಾರ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ರಚಿಸಿ ಕರಾವಳಿ ಭಾಗದ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಹಿಂದುತ್ವ ಅಜೆಂಡ ಬಳಸಿ ಅಧಿಕಾರಕ್ಕೆ ಬಂದ ಬಿಜೆಪಿ ತನ್ನ ಹಿಡನ್ ಅಜೆಂಡಾವಾದ ಹಿಂದುಳಿದ ವರ್ಗವನ್ನು ಧಮನಿಸುವ ಕಾರ್ಯತಂತ್ರವನ್ನು ನಿಧಾನಕ್ಕೆ ಅನುಷ್ಠಾನ ಗೊಳಿಸುತ್ತಿದೆ.

ಈ ನಿಟ್ಟಿನಲ್ಲಿ ಅವರು ಮಾಡಿದ ಮೊದಲ ಕೆಲಸ ಹಿಂದುಗಳ ಆರಾಧ್ಯ ದೈವ, ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಕುರಿತ ಪಠ್ಯವನ್ನು ಶಾಲೆಯ ಪುಸ್ತಕ ದಿಂದ ತೆಗೆದಿದ್ದು. ಇದು ಕರಾವಳಿ ಭಾಗದ ಹಿಂದುಳಿದ ವರ್ಗಗಳಿಗೆ ಮಾಡಿದ ಘೋರ ಅಪಮಾನ, ಅಂತೆಯೇ ಕರಾವಳಿಯ ಇನ್ನೊಬ್ಬ ಮೇಧಾವಿ, ಹೆಸರಾಂತ ಕವಿ ಕಯ್ಯಾರ ಕಿಂಞಣ್ಣ ರೈ ಅವರ ಕುರಿತ ಪಠ್ಯ ವನ್ನು ತೆಗೆದು ಹಾಕಿದ್ದು ಈ ಬಗ್ಗೆ ಬಂಟರ ಸಂಘದ ಒಕ್ಕೂಟ ಪ್ರಬಲವಾಗಿ ಖಂಡಿಸಿದೆ.

ಈ ರೀತಿಯಾಗಿ ಬಸವಣ್ಣ, ಕುವೆಂಪು, ಕನಕದಾಸರು ಆದಿಯಾಗಿ ಎಲ್ಲರ ಪಠ್ಯವನ್ನು ತೆಗೆದು, ವಿರೂಪಗೊಳಿಸಿ ರಾಜ್ಯದ ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಲ್ಲದೆ ವಿಶೇಷವಾಗಿ ಕರಾವಳಿ ಭಾಗದಿಂದ ಗೆದ್ದು ಅಧಿಕಾರ ಪಡೆದು ಕರಾವಳಿ ಭಾಗದ ಪುಣ್ಯ ಪುರುಷರಿಗೆ ಪಠ್ಯ ಪುಸ್ತಕಗಳಲ್ಲಿ ಅವಮಾನ ಮಾಡಿರುವುದು ಖಂಡನೀಯ . ಇನ್ನಾದರೂ ಕರಾವಳಿ ಜನ ಬಿಜೆಪಿಯನ್ನು ದೂರ ಇಡಬೇಕಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

20 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

20 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

20 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

21 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

21 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago