ಉಡುಪಿ: ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ ಜತೆಗೆಎಲ್ಲ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯವರೆಗೆ ಸ್ಥಗಿತಗೊಳಿಸಲಾಗಿದೆ.
ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ದ್ವೀಪಕ್ಕೆ ತೆರಳುವುದು ಅಪಾಯಕಾರಿ. ಈ ಕಾರಣಕ್ಕಾಗಿ ಪ್ರತಿ ವರ್ಷ ಮೇ 15 ರಿಂದ ಸೆಪ್ಟೆಂಬರ್ 15ರ ವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸುತ್ತದೆ. ಮಳೆಗಾಲದಲ್ಲಿ ಪಶ್ಚಿಮ ಕರಾವಳಿಯಲ್ಲಿ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಪ್ರತೀವರ್ಷ ಸ್ಥಗಿತಗೊಳಿಸಲಾಗುತ್ತದೆ.
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಈಗ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಈ ಸುಂದರ ದ್ವೀಪಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೋಟ್ ಹಾಗೂ ಜಲಸಾಹಸ ಕ್ರೀಡೆಗೆ ಕೆಲವು ದಿನಗಳ ಮಟ್ಟಿಗೆ ಅವಕಾಶ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿದೆ.
ನಿಯಮಗಳ ಪ್ರಕಾರ ಮೇ 16ರಿಂದ 4 ತಿಂಗಳು ನಿಷೇಧವಿರಲಿದೆ. ಸಮುದ್ರ ತೀರದಲ್ಲಿ ವಾತಾವರಣದ ಅನುಕೂಲ ಆಧರಿಸಿ ಜೂನ್ 1 ರ ವರೆಗೆ ನೀರಿಗಿಳಿಯಬಹುದು. ಬಳಿಕ ಬೀಚ್ನ ಉದ್ದಕ್ಕೂ ತಡೆಬೇಲಿ ಹಾಕಲಾಗುತ್ತದೆ.ಹಾಗಾಗಿ ದೂರದೂರುಗಳ ಪ್ರವಾಸಿಗರು ಇನ್ನು ಮಳೆಗಾಲದ ನಂತರವೇ ಇಲ್ಲಿಗೆ ಬರುವುದು ಉತ್ತಮ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…