Featured

ಉಡುಪಿ: ಇನ್ನು 4 ತಿಂಗಳು ಮಲ್ಪೆ ಸೈಂಟ್​ ಮೇರಿಸ್​ ಗೆ ಪ್ರವಾಸಿಗರ ನಿರ್ಬಂಧ – vishwanews24

ಉಡುಪಿ : ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪ ಪ್ರವೇಶಕ್ಕೆ ಸೆ. 15 ರ ತನಕ ನಿರ್ಬಂಧ

ಜೂ. 1ರ ನಂತರ ಬೀಚ್‌ ಪ್ರವೇಶಕ್ಕೂ ನಿರ್ಬಂಧ

ಉಡುಪಿ: ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್‌ಮೇರಿಸ್‌ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ ಜತೆಗೆಎಲ್ಲ  ಜಲಸಾಹಸ ಕ್ರೀಡೆಗಳನ್ನು ಅಲ್ಲಿಯವರೆಗೆ ಸ್ಥಗಿತಗೊಳಿಸಲಾಗಿದೆ.

ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ದ್ವೀಪಕ್ಕೆ ತೆರಳುವುದು ಅಪಾಯಕಾರಿ. ಈ ಕಾರಣಕ್ಕಾಗಿ ಪ್ರತಿ ವರ್ಷ ಮೇ 15 ರಿಂದ ಸೆಪ್ಟೆಂಬರ್ 15ರ ವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸುತ್ತದೆ. ಮಳೆಗಾಲದಲ್ಲಿ ಪಶ್ಚಿಮ ಕರಾವಳಿಯಲ್ಲಿ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಪ್ರತೀವರ್ಷ ಸ್ಥಗಿತಗೊಳಿಸಲಾಗುತ್ತದೆ.

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಈಗ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಈ ಸುಂದರ ದ್ವೀಪಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೋಟ್ ಹಾಗೂ ಜಲಸಾಹಸ ಕ್ರೀಡೆಗೆ ಕೆಲವು ದಿನಗಳ ಮಟ್ಟಿಗೆ ಅವಕಾಶ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿದೆ.

ನಿಯಮಗಳ ಪ್ರಕಾರ ಮೇ 16ರಿಂದ 4 ತಿಂಗಳು ನಿಷೇಧವಿರಲಿದೆ. ಸಮುದ್ರ ತೀರದಲ್ಲಿ ವಾತಾವರಣದ ಅನುಕೂಲ ಆಧರಿಸಿ ಜೂನ್ 1 ರ ವರೆಗೆ ನೀರಿಗಿಳಿಯಬಹುದು. ಬಳಿಕ ಬೀಚ್‌ನ ಉದ್ದಕ್ಕೂ ತಡೆಬೇಲಿ ಹಾಕಲಾಗುತ್ತದೆ.ಹಾಗಾಗಿ ದೂರದೂರುಗಳ ಪ್ರವಾಸಿಗರು ಇನ್ನು ಮಳೆಗಾಲದ ನಂತರವೇ ಇಲ್ಲಿಗೆ ಬರುವುದು ಉತ್ತಮ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

18 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

20 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

21 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

21 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

21 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

21 hours ago