ಉಡುಪಿ : ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಸತತವಾಗಿ, ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆಯನ್ನು ಘೋಷಿಸಲಾಗಿತ್ತು. ಪುನರ್ವಸು ಮಳೆ ಮತ್ತೆ ಅಬ್ಬರಿಸುವ ಸಾಧ್ಯತೆಯಿದ್ದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿಯಲ್ಲಿ ಮಳೆಯಿಂದ ಪ್ರವಾಹ ಎದುರಾಗಿದ್ದರೂ, ಜಿಲ್ಲಾ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತ ಗಮನಹರಿಸದೇ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಲೋಕಸಭಾ ಚುನಾವಣೆಯ ವೇಳೆಯೂ ಜಿಲ್ಲಾ ಉಸ್ತುವಾರಿ ತಿಂಗಳಾನುಗಟ್ಟಲೆ ಉಡುಪಿ ಕಡೆ ತಲೆ ಹಾಕಿರಲಿಲ್ಲ.
ಎರಡು ದಿನಗಳ ಹಿಂದೆ ಮುಖ್ಯಮಂತ್ರಿಗಳು ಕರೆದಿದ್ದ ಜಿಲ್ಲಾಧಿಕಾರಿ / ಸಿಇಒ ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು. ಅದಕ್ಕೂ ಮುನ್ನ, ಉಡುಪಿ ಜಿಲ್ಲೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮಾಹಿತಿ ಪಡೆದುಕೊಂಡಿದ್ದರು. ಜೂನ್ 4ಕ್ಕೆ ಚುನಾವಣಾ ಫಲಿತಾಂಶ ಬಂದ ಹತ್ತು ದಿನಗಳ ನಂತರ (ಜೂನ್ 13) ಸಚಿವೆ, ಉಡುಪಿಗೆ ಹೋಗಿದ್ದರು.
ಲೋಕಸಭೆ ಚುನಾವಣೆಯ ಸಂದರ್ಭದಲ್ಲಾಗಲೀ, ವಿಧಾನಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಸಮಯದಲ್ಲಾಗಲೀ ಪಕ್ಷದ ಪ್ರಚಾರಕ್ಕೆ ಆಗಮಿಸದ ಸಚಿವೆಯ ನಡೆ ಸ್ವಪಕ್ಷೀಯರಿಂದಲೇ ತೀವ್ರ ಟೀಕೆಗೆ ಗುರಿಯಾಗಿತ್ತು. ಕೊನೆಗೂ, ಉಡುಪಿಗೆ ಆಗಮಿಸಿದ್ದ ಲಕ್ಷ್ಮೀ ಹೆಬ್ಬಾಳ್ಕರ್, ಜಿಲ್ಲಾ ಕಚೇರಿಯಲ್ಲಿ ಇಲಾಖಾ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು.
ಇದಾದ ನಂತರ ಜಿಲ್ಲಾ ಉಸ್ತುವಾರಿ ಉಡುಪಿ ಕಡೆ ಆಗಮಿಸಿರಲಿಲ್ಲ. ಕಳೆದ ವಾರದಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತು, ಕಡಲ್ಕೊರೆತ ಜೋರಾಗಿದೆ. ಮಳೆ, ಪ್ರವಾಹ, ನೆರೆ, ಆಸ್ತಿಪಾಸ್ತಿ ನಷ್ಟ, ಜನಜೀವನ ಅಸ್ತವ್ಯಸ್ತ ಉಂಟಾಗಿದ್ದರೂ ಲಕ್ಷ್ಮೀ ಹೆಬ್ಬಾಳ್ಕರ್ ಈ ಕಡೆ ಬರದೇ ಇದ್ದದ್ದು, ಸ್ಥಳೀಯರ ಕೋಪಕ್ಕೆ ಕಾರಣವಾಗಿದೆ.
ಉಡುಪಿಯ ಪ್ರವಾಹದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ” ಎರಡು ವಾರದ ಹಿಂದೆ ಜಿಲ್ಲಾ ಮಟ್ಟದ ಸಭೆಯನ್ನು ನಡೆಸಿ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದೇನೆ. ನನ್ನ ಸೂಚನೆಯ ಮೇರೆಗೆ ಅರಣ್ಯ ಇಲಾಖೆಯವರು 450 ಮರಗಳನ್ನು ತೆಗೆದಿದ್ದಾರೆ. ಬೀಳುವ ಹಂತದಲ್ಲಿದ್ದ 80 ವಿದ್ಯುತ ಕಂಬಗಳನ್ನು ತೆಗೆಯಲಾಗಿದೆ. ಒಳಚರಂಡಿ ವ್ಯವಸ್ಥೆಯನ್ನು ಸರಿ ಮಾಡಲಾಗಿತ್ತು. ಹಿಂದಿನ ವರ್ಷದ ಅನುಭವ ಇದ್ದಿದ್ದಾರಿಂದ ಮುಂಜಾಗೃತಾ ಕ್ರಮವನ್ನು ತೆಗೆದುಕೊಂಡಿದ್ದೆವು ” ಎಂದು ಸಚಿವೆ ಹೇಳಿದ್ದಾರೆ.
” ಲಕ್ಷ್ಮೀ ಹೆಬ್ಬಾಳ್ಕರ್ ಕಾಣೆಯಾಗಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರೆ ಏನು ಪ್ರಯೋಜನ? ಉಸ್ತುವಾರಿಯನ್ನು ಸಿಎಂ ಪ್ರಶ್ನಿಸಬೇಕು. ಉಡುಪಿ ಜಿಲ್ಲೆಯೆಂದರೆ ಸರ್ಕಾರಕ್ಕೆ ನಿರ್ಲ್ಯಕ್ಷ, ಪ್ರವಾಹ ವಿಚಾರದಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ” ಎಂದು ಸ್ಥಳೀಯ ಬಿಜೆಪಿ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…