Featured

ಉಡುಪಿ : ಈಶ್ವರಪ್ಪಗೆ ಕ್ಲೀನ್ ಚಿಟ್: ಸರ್ಕಾರವೇ ತಮ್ಮ ಪಕ್ಷದ ಆರೋಪಿಯ ರಕ್ಷಣೆ ಮಾಡುವಲ್ಲಿ ಶಾಮೀಲಾಗಿದೆ: ಕೃಷ್ಣಮೂರ್ತಿ ಆಚಾರ್ಯ – Vishwanews24

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಈಶ್ವರಪ್ಪಗೆ ಕ್ಲೀನ್ ಚಿಟ್ : ಬಿಜೆಪಿ ಸರ್ಕಾರ ಇರುವುದೇ ಭ್ರಷ್ಟರನ್ನು ರಕ್ಷಣೆ ಮಾಡುವುದಕ್ಕೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿರುವುದು ಬಿಜೆಪಿ ಸರ್ಕಾರ ಇರುವುದೇ ಭ್ರಷ್ಟರನ್ನು ರಕ್ಷಣೆ ಮಾಡುವುದಕ್ಕೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಆಗಿರುವ ಕೃಷ್ಣಮೂರ್ತಿ ಆಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು ಆತ್ಮಹತ್ಯೆಗೆ ಮೊದಲು ಮೃತ ಸಂತೋಷ್ ಪಾಟೀಲ್ ಬರೆದಿಟ್ಟ ಪತ್ರದಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹಣ ಬಿಡುಗಡೆ ಮಾಡದೆ ಇದ್ದರೆ ಆತ್ಮಹತ್ಯೆಯೊಂದೇ ಆಯ್ಕೆಯಾಗುತ್ತದೆ ಎಂದೂ ಹೇಳಿದ್ದರು. ಸಚಿವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಲು ಇನ್ನು ಯಾವ ಸಾಕ್ಷಿ ಬೇಕು?

ಈ ಬಿಜೆಪಿ ಸರ್ಕಾರ ತಮ್ಮ ಪಕ್ಷದ ನಾಯಕ ಆರೋಪಿ ಈಶ್ವರಪ್ಪ ರ ರಕ್ಷಣೆ ಮಾಡಲು ಜನರಿಗೆ ನ್ಯಾಯ ಕೊಡಬೇಕಾದ ಸರ್ಕಾರಿ ಇಲಾಖೆಗಳಿಗೆ ಒತ್ತಡ ಏರಿ ಆರೋಪಿ ಭ್ರಷ್ಟರನ್ನು ರಕ್ಷಣೆ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ .

ಮಾಜಿ ಸಚಿವರ ವಿರುದ್ಧ ಸಂತೋಷ್ ಪಾಟೀಲ್‌ ನೇರ ಆರೋಪ ಮಾಡಿದ್ದರು. ಸಾವಿಗೆ ಕಾರಣ ಈಶ್ವರಪ್ಪ ಅಂತ ಹೇಳಿದ್ದರು. ಅದರೆ ಬಿ-ರಿಪೋರ್ಟ್ ಹಾಕಿ‌ ಕೇಸ್ ಕ್ಲೋಸ್ ಮಾಡಿದ್ದಾರೆ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಾ ಡಿಪಾರ್ಟ್ ಮೆಂಟ್ ಪೇಲ್ಯೂರ್ ಆಗಿದೆ ಎಂದರು.

ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತ. ಅವರ ಪತ್ನಿಯೇ ನ್ಯಾಯ ಸಿಗಲ್ಲ ಅಂತ ರಾಜ್ಯಪಾಲರಿಗೆ ಪತ್ರವನ್ನು ಬರೆದಿದ್ದರು. ಬಹುಶಃ ಈಶ್ವರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿಯವರನ್ನ ಹೆದರಿಸಿರಬಹುದು. ಅದಕ್ಕೆ ಹೆದರಿ ಅಧಿಕಾರಿಗಳ ಮೂಲಕ ಕೇಸ್ ಮುಚ್ಚಿಸಿರಬಹುದು. ಅವರ ಕುಟುಂಬದ ದುಃಖ ಇನ್ನೂ‌ ಮರೆಯಾಗಿಲ್ಲ. ಅಷ್ಟರೊಳಗೆ ಬಿ ರಿಪೋರ್ಟ್ ಹಾಕಿದ್ದಾರೆ. ಸರ್ಕಾರವೇ ತಮ್ಮ ಪಕ್ಷದ ನಾಯಕ ಆರೋಪಿ ಈಶ್ವರಪ್ಪ ರ ರಕ್ಷಣೆ ಮಾಡುವಲ್ಲಿ ಶಾಮೀಲಾಗಿದೆ. ಇದೇ ರೀತಿ ಅದರೆ ಮುಂದೆ ಕಾಂಟ್ರಾಕ್ಟ್ ಕೆಲಸ ಮಾಡಲು ಸಮಾನ್ಯ ಜನರು ಯಾರು ಮುಂದೆ ಬರುತ್ತಾರೆ ಎಲ್ಲಿದೆ ನ್ಯಾಯ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

11 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

13 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

13 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

13 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

13 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago