Featured

ಉಡುಪಿ: ಈಶ್ವರಪ್ಪಗೆ ತಾಕತ್ತಿದ್ದರೆ ಅವರ ಸರಕಾರಿ ಕಾರಿನ ಎದುರು ಕೇಸರಿ ಧ್ವಜ ಹಾರಿಸಲಿ : ಜಿಲ್ಲಾ ಕಾಂಗ್ರೆಸ್ – Vishwanews24

ಉಡುಪಿ: ಈಶ್ವರಪ್ಪಗೆ ತಾಕತ್ತಿದ್ದರೆ ಅವರ ಸರಕಾರಿ ಕಾರಿನ ಎದುರು ಕೇಸರಿ ಧ್ವಜ ಹಾರಿಸಲಿ..

ಈಶ್ವರಪ್ಪನವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ಸೂಕ್ತ ಪ್ರಕರಣವನ್ನು ದಾಖಲಿಸಿ..

ಉಡುಪಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಅಜ್ಜರಕಾಡು ಸೈನಿಕರ ಸ್ಮಾರಕದ ಬಳಿ ಪ್ರತಿಭಟನೆ..

ಉಡುಪಿ: ಸಚಿವ ಈಶ್ವರಪ್ಪನವರಿಗೆ ತಾಕತ್ತಿದ್ದರೆ ಅವರ ಸರಕಾರಿ ಕಾರಿನ ಎದುರು ಮೊದಲು ಕೇಸರಿ ದ್ವಜ ಹಾರಿಸಲಿ. ಸಂವಿಧಾನದ ರಕ್ಷಣೆಯ ಪವಿತ್ರವಾದ ಜವಾಬ್ದಾರಿಯನ್ನು ಹೊಂದಿರುವ ರಾಜ್ಯಪಾಲರು ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತಮ್ಮ ಸಂವಿಧಾನದತ್ತ ಅಧಿಕಾರವನ್ನು ಚಲಾಯಿಸಿ, ತಕ್ಷಣವೇ ಈಶ್ವರಪ್ಪನವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ಸೂಕ್ತ ಪ್ರಕರಣವನ್ನು ದಾಖಲಿಸುವಂತೆ ದಾಖಲಿಸಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಆಗ್ರಹಿಸಿದರು.

ಉಡುಪಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಷ್ಟ್ರಧ್ವಜವನ್ನು ಅವಮಾನ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪ ಅವರ ವಿರುದ್ಧ ಇಂದು ಅಜ್ಜರಕಾಡು ಸೈನಿಕರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಅಶೋಕ್ ಕುಮಾರ್ ಮಾತನಾಡಿ, ” ದಿನ ಬೆಳಗಾದರೆ ಬಿಜೆಪಿಯವರು ಹಿಂದುತ್ವ, ಸಂವಿಧಾನದ ಬಗ್ಗೆ , ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ಈ ದೇಶವನ್ನು ಜಾತಿ , ಧರ್ಮ ಆಧಾರಿತವಾಗಿ ವಿಭಜನೆ ಮಾಡುತ್ತಿದ್ದು, ಸಂವಿಧಾನದ ಮೂಲಕ್ಕೆ ಕೊಡಲಿ ಏಟು ಹಾಕುತ್ತಿದ್ದಾರೆ. ಗಾಂಧೀಜಿಯಾ ಜನ್ಮ ದಿನವನ್ನು ಆಚರಿಸುತ್ತಾರೆ. ಒಳಗಿನಿಂದ ಅವರನ್ನು ವಿರೋಧಿಸುತ್ತಾರೆ” ಎಂದರು.

ಇನ್ನು ಪವಿತ್ರವಾದ ತ್ರಿವರ್ಣ ದ್ವಜದಡಿಯಲ್ಲಿ ಸ್ವಾತಂತ್ರ್ಯ ಪಡೆದುಕೊಂಡಿದ್ದೇವೆ ಕರ್ನಾಟಕ ಸರಕಾರದಲ್ಲಿ ಸಚಿವರಾಗಿರುವ ಕೆ.ಎಸ್. ಈಶ್ವರಪ್ಪನವರು ಇತ್ತೀಚೆಗೆ ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆಯನ್ನು ಕೊಟ್ಟಿರುತ್ತಾರೆ. ಇದು ಅತ್ಯಂತ ಅಪಾಯಕಾರಿ ದೇಶದ್ರೋಹದ ಹೇಳಿಕೆಯಾಗಿದೆ. ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಸ್ವಾತಂತ್ರ್ಯ, ಅಖಂಡತೆ, ಸಾರ್ವಭೌಮತೆ, ಅಸ್ಮಿತೆ ಮತ್ತು ಸಂವಿಧಾನಗಳ ಸಂಕೇತವಾಗಿದೆ. ಹಾಗಾಗಿ, ಈಶ್ವರಪ್ಪನವರ ಹೇಳಿಕೆಯಿಂದ ದೇಶದ ಪ್ರಜೆಗಳಿಗೆ ದಿಗ್ಧಮೆಯಾಗಿದೆ. ಇದನ್ನು ವಿರೋಧಿಸಿ, ಈಶ್ವರಪ್ಪನವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈಬಿಟ್ಟು ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ ರಾಷ್ಟ್ರಧ್ವಜದ ಗೌರವವನ್ನು ಎತ್ತಿ ಹಿಡಿಯುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಶಾಸಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿಯನ್ನು ಮಾಡುತ್ತಿದ್ದಾರೆ.

ರಾಷ್ಟ್ರಾಭಿಮಾನಿ ಜನ ದೇಶದ್ರೋಹದ ಹೇಳಿಕೆಗಳನ್ನು, ಸಂವಿಧಾನದ ಆಶಯಗಳಿಗೆ ಧಕ್ಕೆಯಾಗುವ ವಿಚಾರಗಳನ್ನು ಮತ್ತು ರಾಷ್ಟ್ರ ಲಾಂಛನಗಳಿಗೆ ಅಪಮಾನವನ್ನು ಸಹಿಸಲಾಗುವುದಿಲ್ಲ ಮತ್ತು ಇಂತಹ ಘಟನೆಗಳೊಂದಿಗೆ ರಾಜಿ ಮಾಡಿಕೊಳ್ಳುವ ವಿಷಯವೇ ಇರುವುದಿಲ್ಲ. ಹೀಗಿರುವಾಗ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ವ್ಯಕ್ತಿಯೊಬ್ಬ ರಾಜ್ಯದ ಸಚಿವನಾಗಿರುವುದನ್ನು ಕಲ್ಪಿಸಲೂ ಸಾಧ್ಯವಿಲ್ಲ. ದಯವಿಟ್ಟು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನು ನೀಡಿ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕೆಂದು ಎಂದು ಆಗ್ರಹಿಸಿದರು

ಪ್ರತಿಭಟನೆಯಲ್ಲಿ ಭಾಗವಹಿಸಿದ ಮುಖಂಡರಾದ ಕುಶಾಲ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉದ್ಯಾವರ ನಾಗೇಶ್ ಕುಮಾರ್, ಶಬ್ಬೀರ್ ಅಹಮದ್, ಪ್ರಖ್ಯಾತ ಶೆಟ್ಟಿ, ಹರೀಶ್ ಶೆಟ್ಟಿ ಪಾಂಗಳ, ಕೀರ್ತಿ ಶೆಟ್ಟಿ, ಪ್ರಶಾಂತ್ ಜತ್ತನ್ನ, ಯತೀಶ್ ಕರ್ಕೇರ, ರಮೇಶ್ ಕಾಂಚನ್, ಮುರಳಿ ಶೆಟ್ಟಿ, ಗಣೇಶ್ ನೆರ್ಗಿ, ಗೋಪಾಲಕೃಷ್ಣ ಶೆಟ್ಟಿ, ಲಕ್ಷ್ಮಣ ಪೂಜಾರಿ, ವಿಜಯ ಪೂಜಾರಿ, ಉಪೇಂದ್ರ ಮೆಂಡನ್, ನಾರಾಯಣ್ ಕುಂದರ್, ವತ್ಸಲಾ ವಿನೋದ್, ಸುರೇಶ್ ಕುಮಾರ್, ಪ್ರಶಾಂತ್ ಪೂಜಾರಿ, ಸತೀಶ್ ಮಂಚಿ, ಲಕ್ಷ್ಮಣ ಶೆಟ್ಟಿ, ಸೂರಜ್ ಕಲ್ಮಾಡಿ, ಸಾಯಿರಾಜ್, ಡಿಯೋನ್ ಮೊದಲಾದವರು ಭಾಗವಹಿಸಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

16 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

16 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

16 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

17 hours ago