ಮಲ್ಪೆ: ಮುಳುಗುತಜ್ಞ, ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳ ಚಿಕಿತ್ಸೆಯನ್ನು ಉಚಿತವಾಗಿ ನೀಡುವುದಾಗಿ ಕೇರಳ ರಾಜ್ಯದ ಸಂಘ, ಸಂಸ್ಥೆಯವರು ಮುಂದೆ ಬಂದಿದ್ದು, ಕೇರಳದ ಕೋಯಿಕ್ಕೋಡ್‌ನ ಮಲ್ಟಿ ಸ್ಪೆಶಾಲಿಟಿ ಮೈತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳಾದ ಕಾರ್ತಿಕ್ (23), ಬ್ರಾಹ್ಮಿ (7) ಅನಾರೋಗ್ಯ ಪೀಡಿತರಾಗಿದ್ದು, ವೈದ್ಯಕೀಯ ಚಿಕಿತ್ಸೆಗಳಿಗೆ ಲಕ್ಷಾಂತರ ರೂ. ವ್ಯಯಿಸಬೇಕಿದೆ. ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದ ಅರ್ಜುನ್ ಮೃತ ದೇಹವನ್ನು ಪತ್ತೆ ಮಾಡಲು ಈಶ್ವರ್ ಮಲ್ಪೆ ತಂಡ ಮಹತ್ವದ ಪಾತ್ರ ವಹಿಸಿದ್ದರು. ಇದರಿಂದಾಗಿ ಇವರ ಬಗ್ಗೆ ಕೇರಳದಲ್ಲಿ ಅಭಿಮಾನ ಹೆಚ್ಚಾಗಿದ್ದು, ಕುಟುಂಬದ ಸಮಸ್ಯೆಯರಿತ ಅಲ್ಲಿನ ಸಂಘ ಸಂಸ್ಥೆಯವರು ಒಟ್ಟಾಗಿ ಕುಟುಂಬವನ್ನು ಕರೆಸಿಕೊಂಡಿದ್ದಾರೆ.
ಆಸ್ಪತ್ರೆಯಲ್ಲಿ ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾಗುವ ನಂಬಿಕೆ ಹೊಂದಿದ್ದೇವೆ. ಎಷ್ಟೇ ಖರ್ಚಾದರೂ ನಾವು ಭರಿಸುತ್ತೇವೆ ಎಂದು ಅಲ್ಲಿನ ಸಂಘ ಸಂಸ್ಥೆಯವರು ಅಭಿಮಾನ ತೋರಿದ್ದಾರೆ ಎಂದು ಈಶ್ವರ್ ತಿಳಿಸಿದ್ದಾರೆ. ಉಡುಪಿ ಸಹಿತ ಕರಾವಳಿಯ ಸಂಘ ಸಂಸ್ಥೆಯವರು, ಸಾರ್ವಜನಿಕರು ಸಾಕಷ್ಟು ಸಹಕಾರ ನೀಡಿದ್ದಾರೆ. ಆದರೆ ಸರಕಾರದಿಂದ ಸಹಾಯ ದೊರೆತಿಲ್ಲ. ಮಕ್ಕಳ ಚಿಕಿತ್ಸೆಗಾಗಿ ಸದ್ಯಕ್ಕೆ ಕೇರಳದಲ್ಲಿದ್ದೇನೆ ಎಂದು ಈಶ್ವರ್ ತಿಳಿಸಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…